ಉದ್ಯಮಿ, ಸಮಾಜಸೇವಕ ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಫಲ್ಯ ಇನ್ನಿಲ್ಲ

ಬಂಟ್ವಾಳ: ಪಾಣೆಮಂಗಳೂರು ನಿವಾಸಿ, ಜ್ಯೋತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ. ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತರಾಗಿ, ವೃತ್ತಿಯಲ್ಲಿ ಟೈಲರ್ ಆಗಿ, ತುರ್ತು ಪರಿಸ್ಥಿತಿ ವಿರುದ್ದ ಹೋರಾಟಗಾರರಾಗಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿ, ನೂರಾರು ಮಂದಿಗೆ ಉದ್ಯೋಗದಾತರಾಗಿ, ಪಾಣೆಮಂಗಳೂರು ಶ್ರೀ ಭಯಂಕೇಶ್ವರ ದೇವಸ್ಥಾನ, ನರಿಕೊಂಬು ನಾಲ್ಕೈತ್ತಾಯ ದೈವಸ್ಥಾನ, ಶಂಭೂರು ಶ್ರೀ ವೀರಭದ್ರ ದೇವಸ್ಥಾನ, ಪಾಣೆಮಂಗಳೂರು ಶ್ರೀ ಸತ್ಯದೇವತಾ ಗುಡಿ, ಮೆಲ್ಕಾರ್ ನಾಗಸನ್ನಿಧಿ,  ಬಜಗೋಳಿ ಧರ್ಮದೇವಿ ದೇವಸ್ಥಾನ, ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಶ್ರೀ ಧರ್ಮರಸು ಕ್ಷೇತ್ರ, ವಗ್ಗ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದಲ್ಲಿ ವಿಶೇಷ ಕೊಡುಗೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆ ಮಧ್ಯಾಹ್ನ 3.30ಕ್ಕೆ ಸ್ವಗೃಹ ಬಳಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉದ್ಯಮಿ, ಸಮಾಜಸೇವಕ ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಫಲ್ಯ ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*