ಜೋಡುಮಾರ್ಗ ಜೇಸಿ ಸಪ್ತಾಹ ಸಮಾರೋಪ: ಷೋಡಶಾವಧಾನಿ ಅನ್ವೇಶ್ ಅಂಬೆಕಲ್ಲು ಅವರಿಗೆ ಕಲಾಶ್ರೀ ಪ್ರಶಸ್ತಿ ಪ್ರದಾನ

ಬಂಟ್ವಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ ಜೇಸಿ ಸಪ್ತಾಹದ ಸಮಾರೋಪದ ಹಿನ್ನೆಲೆಯಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಷೋಡಶಾವಧಾನ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾದ 9ನೇ ತರಗತಿ ವಿದ್ಯಾರ್ಥಿ ಅನ್ವೇಶ್ ಅಂಬೆಕಲ್ಲು ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಪೈ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಉದ್ಯಮಿ ಹಾಗೂ ಲಯನ್ಸ್ ಕ್ಲಬ್ ವಲಯ ಸಹಸಂಯೋಜಕ ಸುಧಾಕರ ಆಚಾರ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ, ಜೋಡುಮಾರ್ಗ ಜೇಸಿ ವ್ಯಕ್ತಿತ್ವ ವಿಕಸನದೊಂದಿಗೆ ಪ್ರತಿಭಾ ಪ್ರೋತ್ಸಾಹ ಮೂಲಕ ಸಮಾಜಕ್ಕೆ ಉತ್ತಮ ಮಾರ್ಗದರ್ಶನವನ್ನು ನೀಡುತ್ತಿದ್ದು, ತನ್ನ ಚಟುವಟಿಕೆಗಳ ಮೂಲಕ ಮಾದರಿಯಾಗಿದೆ ಎಂದು ಶುಭ ಹಾರೈಸಿದರು.