ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು “ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕರಾಮ ಪೂಜಾರಿ ಹೇಳಿದ್ದಾರೆ.
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಂಟ್ಟಾಳ ವಹಿಸಿ ಶುಭ ಹಾರೈಸಿದರು. ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ಪಿ. ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ವಿ ಸು ಭಟ್ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು
Be the first to comment on "ಕಸಾಪ ಬಂಟ್ವಾಳ ತಾಲೂಕು ಘಟಕದಿಂದ ಕನ್ನಡ ಭಾಷಾ ಕಾರ್ಯಾಗಾರ"