ಪ್ರಮುಖ ಸುದ್ದಿಗಳು

ಹಿರಿಯ ನಾಗರಿಕ ದಿನಾಚರಣೆಯಂದೇ ಧರಣಿ ಕುಳಿತ ನಿವೃತ್ತ ಸರಕಾರಿ ನೌಕರರು…. ಕಾರಣವೇನು?

ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ ಎಂದು ಘೋಷಣೆ ಕೂಗಿದರು

ಮಂಗಳೂರು: ಹಿರಿಯ ನಾಗರಿಕರ ದಿನಾಚರಣೆಯ ದಿನದಂದು ನಿವೃತ್ತ ಸರಕಾರಿ ನೌಕರರು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ಸಾಲ ನಾವೇನೂ ಕೇಳ್ತಾ ಇಲ್ಲ… ಸುದೀರ್ಘ ವರ್ಷಗಳ ಕಾಲ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಆಗ್ರಹವಾಗಿದೆ ಎಂದವರು ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ.

ಜಾಹೀರಾತು

ಅವರು ಮಂಗಳವಾರ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಜು.1,2022ರಿಂದ ಜು.31, 2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯೂಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಪರಿಷ್ಕøತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಕೋವಿಡ್ ಸಮಯದಲ್ಲಿ ಸರಕಾರ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು ಈಗಾಗಲೇ ನಮ್ಮ ಬೇಡಿಕೆಗಳನ್ನು ತಹಸೀಲ್ದಾರ್‍ನ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆಯುವ ಕೆಲಸ ಮಾಡಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯ ವ್ಯಾಪಿ ಇಂದು ಹಿರಿಯ ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣ ಮಾಡಿದೆ. ಇದು ಮುಂದುವರಿಯದೇ ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದರು.

ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರ ಬೀದಿಗೆ ಇಳಿದು ಪ್ರತಿಭಟನೆ ಮಾಡುವಂತದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು. ನಿವೃತ್ತ ಹಿರಿಯ ಸರಕಾರಿ ನೌಕರರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷಗಳು ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನೆ ಇರಲು ಸಾಧವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.

ಜಿಲ್ಲಾ ಸಂಚಾಲಕ ನಾರಾಯಣ ಪೂಜಾರಿ ಮಾತನಾಡಿ, ಸರಕಾರಕ್ಕೆ ಇದು ಶೋಭೆ ತರುವ ಕೆಲಸವಲ್ಲ. ನವೇನೂ ಹೆಚ್ಚುವರಿ ಬೇಕು ಅನ್ನುತ್ತಿಲ್ಲ. ಹಕ್ಕಿನಲ್ಲಿ ಇರುವ ಸವಲತ್ತನ್ನು ನ್ಯಾಯಯುತವಾಗಿ ನೀಡಿ ಎನ್ನುವುದು ನಮ್ಮ ಮನವಿ. ಸರಕಾರದ ಯೋಜನೆಗಳನ್ನು ಜಾರಿಗೊಳಿಸುವ ಬಹಳಷ್ಟು ಕೆಲಸಗಳಲ್ಲಿ ನಮ್ಮ ಪಾತ್ರವಿದೆ ಆದರೆ ನಮ್ಮನ್ನು ಕಡೆಗಣಿಸುವುದು ಸರಿಯಲ್ಲ. ಸಮಸ್ಯೆಗೆ ಪರಿಹಾರ ನೀಡಲು ತಕ್ಷಣವೇ ಆದೇಶ ಮಾಡಬೇಕು. ಸಂಧ್ಯಾ ಕಾಲದಲ್ಲಿ ನಮಗೆ ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ ಎಂದರು.

ಸಂಚಾಲಕರಾದ ಮಂಜುಳಾ ಜೀ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯ ಬಳಿಕ ಸಂಚಾಲಕರು ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಿವೃತ್ತ ಸರಕಾರಿ ನೌಕರರ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಿವೃತ್ತ ಸರಕಾರಿ ನೌಕರರು ಉಪವಾಸ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನ ಸೌಧ ತನಕ ಪಾದಯಾತ್ರೆ ಹಾಗೂ ಇಲ್ಲೂ ಸರಕಾರ ಸರಿಯಾದ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.