ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ

ವಿದ್ಯಾರ್ಥಿಗಳು, ಯುವಸಮಾಜ ಸಿವಿಲ್ ಸರ್ವಿಸ್ ಪರೀಕ್ಷೆಗೆ ಶ್ರಮವಹಿಸಿ ತರಬೇತು ಪಡೆಯುವುದರ ಜೊತೆಗೆ ಅದರಲ್ಲಿ ತೇರ್ಗಡೆ ಹೊಂದಿ ದೇಶದ ಉನ್ನತ ಹುದ್ದೆಯಲ್ಲಿ ಕಾಣುವಂತಾಗಬೇಕು. ಯುವಸಂಪತ್ತು ದೇಶದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಡೈಜಿವರ್ಲ್ಡ್ ಸಂಸ್ಥೆಯ ಮುಖ್ಯಸ್ಥರು ಮತ್ತು ಭಾಷಣಕಾರರಾದ ವಾಲ್ಟರ್ ನಂದಳಿಕೆ ಹೇಳಿದರು.

ಜಾಹೀರಾತು

ಅವರು ಬುಧವಾರ ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ಬಿಸಿರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷರಾದ ರಶೀದ್ ವಿಟ್ಲ ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಆಜೀವ ಸದಸ್ಯ ಡಿ.ಪಿ. ಸಿದ್ದೀಕ್ ಹಾಜಿ, ಮಾಜಿ ಜಿಲ್ಲಾಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್, ಸುಳ್ಯ ಘಟಕದ ಅಧ್ಯಕ್ಷ ಅಬೂಬಕರ್ ಪಾರೆಕ್ಕಲ್ ವೇದಿಕೆಯಲ್ಲಿದ್ದರು.

ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಅಕ್ಷರ ದಾಸೋಹಕ್ಕೆ ಉಚಿತ ತರಕಾರಿ ವಿತರಿಸುತ್ತಿರುವ ಶರೀಫ್ ಮೆಲ್ಕಾರ್ ಅವರನ್ನು ಗಾಂಧಿ ಜಯಂತಿ ಪ್ರಯುಕ್ತ ಸನ್ಮಾನಿಸಲಾಯಿತು. ತಾಲೂಕಿನಲ್ಲಿ ಕಳೆದ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ 13 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ತಾಲೂಕಿನ 51 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಜಮೀಯ್ಯತುಲ್ ಫಲಾಹ್ ಸದಸ್ಯರ ಆಡಳಿತದ ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ಮತ್ತು ರಝಾನಗರದ ಬುರೂಜ್ ಪಬ್ಲಿಕ್ ಸ್ಕೂಲ್ ಕಳೆದ ಸಾಲಿನಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಆ ಶಾಲೆಗಳನ್ನು ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ನಿವೃತ್ತ ಶಿಕ್ಷಕ ಬಿ.ಎಂ. ತುಂಬೆ ಅವರಿಂದ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ ನೆರವೇರಿತು.

ಉಪಾಧ್ಯಕ್ಷ ಶೇಖ್ ರಹ್ಮತುಲ್ಲಾ ಸ್ವಾಗತಿಸಿದರು. ಆಶಿಕ್ ಕುಕ್ಕಾಜೆ ಕಿರಾಅತ್ ಪಠಿಸಿದರು. ಅಬೂಬಕರ್ ನೋಟರಿ ವಿದ್ಯಾರ್ಥಿ ವೇತನ ಪಟ್ಟಿ ವಾಚಿಸಿದರು. ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್ ವಂದಿಸಿದರು. ಹಕೀಂ ಕಲಾಯಿ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದ್ ನಾರಂಕೋಡಿ, ಉಬೈದ್ ವಿಟ್ಲ, ಹರ್ಷದ್ ಸರವು, ಟಿ.ಕೆ. ಮಹಮ್ಮದ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*