ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ, ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಸಂಯೋಜನೆಯಲ್ಲಿ 3 ದಿನಗಳ ಚಿಗುರು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಸಂಪನ್ನಗೊಂಡಿತು.
ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಅಧ್ಯಕ್ಷ ಯೋಗೀಶ್ ಆಳ್ವ ಶಿಬಿರ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪಪ್ರಾಂಶುಪಾಲೆ ಜಯಲಕ್ಷ್ಮೀ ಪಿ.ಎನ್, ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಕಾರ್ಯದರ್ಶಿ ರಾಮಪ್ರಸಾದ್ ರೈ ತಿರುವಾಜೆ, ಖಜಾಂಚಿ ಚಿತ್ತರಂಜನ್ ಕೆ.ಆರ್., ಪತ್ರಕರ್ತ ಮೌನೇಶ್ ವಿಶ್ವಕರ್ಮ, ಎಸ್‌ಡಿಎಂಸಿ ಸದಸ್ಯ ದಿನಕರ್ ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು, ಸಾಮಾಜಿಕ ಮುಂದಾಳು ಪ್ರಭಾಕರ ಶೆಟ್ಟಿ ಪೆರ್ವ, ಸಜೀಪ ಮೂಡ ಗ್ರಾ.ಪಂ.ಸದಸ್ಯ ವಿಶ್ವನಾಥ ಬೆಳ್ಚಾಡ, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಮೌನೇಶ್ ವಿಶ್ವಕರ್ಮ, ಮುರಳೀಕೃಷ್ಣ ರಾವ್, ಸಂದೀಪ್ ಸಾಲ್ಯಾನ್, ಅರವಿಂದ ಕುಡ್ಲ, ಪ್ರೇಮನಾಥ ಮರ್ಣೆ ಭಾಗವಹಿಸಿದ್ದರು. ಉಪಪ್ರಾಂಶುಪಾಲ ಗಣೇಶ್ ಸ್ವಾಗತಿಸಿದರು, ಶಿಬಿರದ ಸಂಯೋಜಕ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
Be the first to comment on "ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ"