ಬಂಟ್ವಾಳ

ಕೆಟ್ಟು ನಿಂತ ಲಾರಿ: ಬಿ.ಸಿ.ರೋಡ್ ಸೇತುವೆಯಲ್ಲಿ ಟ್ರಾಫಿಕ್ ಜಾಮ್

ತಾಂತ್ರಿಕ ದೋಷದಿಂದ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿಯೊಂದು ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನೇತ್ರಾವತಿ ನದಿ ಸೇತುವೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಅರ್ಧ ತಾಸಿಗಿಂಲೂ ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತು

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಮಾಡುತ್ತಿದ್ದ ಈ ಲಾರಿ ಬಿಸಿರೋಡಿನ ನೇತ್ರಾವತಿ ಸೇತುವೆಯ ಮಧ್ಯ ಭಾಗದಲ್ಲಿ ಕೆಟ್ಟು ನಿಂತಿತ್ತು.

ಸಂಜೆ ಸುಮಾರು 6.30 ಗಂಟೆಗೆ ಲಾರಿ ಕೆಟ್ಟು ನಿಂತ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಯಿತು. ನವರಾತ್ರಿ ಹಬ್ಬದ ಸಂದರ್ಭದಲ್ಲಿ  ವಾಹನಗಳಲ್ಲಿ ಓಡಾಟ ಮಾಡುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗಿದ್ದು, ಅರ್ಧ ತಾಸಿನಲ್ಲಿ ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಬಳಿಕ ಬಂಟ್ವಾಳ ‌ನಗರ ಠಾಣಾ ಎಸ್.ಐ‌.ರಾಮಕೃಷ್ಣ ಅವರು ವಾಹನಗಳ ಅಡ್ಡಾದಿಡ್ಡಿ ಓಡಾಟಕ್ಕೆ ಬ್ರೇಕ್ ಹಾಕಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟ ಬಳಿಕ ಕೆಟ್ಟು ನಿಂತ ಲಾರಿಯನ್ನು ಜೆಸಿಬಿಯ ಮೂಲಕ ತೆರವುಗೊಳಿಸಿದರು. ಟ್ರಾಪಿಕ್ ಎ.ಎಸ್.ಐ.ವಿಜಯ್ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts