ನವರಾತ್ರಿ ಉತ್ಸವ ಅಂಗವಾಗಿ ಆಯುಧ ಪೂಜಾ ಕಾರ್ಯಕ್ರಮ ತಾಲೂಕು ಕಚೇರಿ ಬಂಟ್ವಾಳ ದಲ್ಲಿ ನಡೆಯಿತು.
ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾವಿಧಿ ವಿಧಾನ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ಬಂಟ್ವಾಳ ತಹಶೀಲ್ದಾರ್ ಡಿ. ಅರ್ಚನಾ ಭಟ್ ಭಾಗವಹಿಸಿ, ಆರೋಗ್ಯ, ಸಂಪತ್ತು, ನೆಮ್ಮದಿಗಳ ಜೊತೆ ಎಲ್ಲಾ ಪರಿಸ್ಥಿತಿಗಳನ್ನೂ ಎದುರಿಸಲು ಶಕ್ತಿ ಬೇಕು. ದುರ್ಗಾ ದೇವಿಯು ಎಲ್ಲರಿಗೂ ಇಂತಹ ಶಕ್ತಿಯನ್ನು ಕರುಣಿಸಲಿ ಎಂದು ಶುಭ ಹಾರೈಸಿ, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯ ಕೋರಿದರು.
ಉಪತಹಸೀಲ್ದಾರ್ ನರೆಂದನಾಥ್ ಮಿತ್ತೂರು, ರಾಜೇಶ್ ನಾಯ್ಕ್, ನವೀನ್ ಬೆಂಜನಪದವು,
ವಿಜಯ ವಿಕ್ರಮ್, ದಿವಾಕರ ಮುಗಳಿಯ ಕಂದಾಯ ನಿರೀಕ್ಷಕರಾದ ಜನಾರ್ದನ್.ಜೆ, ವಿಜಯ್ ಆರ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)