ಪುಂಜಾಲಕಟ್ಟೆ

ಬಾಂಬಿಲ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಕಾರು: ಮಹಿಳೆ ಸ್ಥಳದಲ್ಲೇ ಮೃತ್ಯುವಶ

ಬಿ.ಸಿ.ರೋಡಿನಿಂದ ಬೆಳ್ತಂಗಡಿಗೆ ತೆರಳುವ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು,  ಮಂಗಳೂರಿನ ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಗ್ಗೆ ಸುಮಾರು 4.30  ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.
ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ಣು, ಜೀವಹಾನಿಗಳು ನಡೆದಿವೆ. ಇತ್ತೀಚೆಗೆ ಇದೊಂದು ಅಪಘಾತ ಸ್ಪಾಟ್ ಆಗಿ ಪರಿವರ್ತನೆ ಆಗುತ್ತಿದೆ  ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts