ಬಂಟ್ವಾಳ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು.  ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts