
ತಮ್ಮ ಹಕ್ಕು ಚಲಾಯಿಸಿದ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಆಳ್ವ, ಮಹಮ್ಮದ್ ಶರೀಫ್, ಮಾಜಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜನಾರ್ದನ ಚಂಡ್ತಿಮಾರ್, ಅಬುಬಕರ್ ಸಿದ್ದೀಕ್ ಗುಡ್ಡೆಯಂಗಡಿ.
ಬಂಟ್ವಾಳ: ವಿಧಾನಪರಿಷತ್ ಉಪಚುನಾವಣೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸೋಮವಾರ ನಡೆಯುತ್ತಿದ್ದು, ಬಂಟ್ವಾಳ ತಾಲೂಕಿನ 51 ಗ್ರಾಪಂ, 2 ನಗರ ಸ್ಥಳೀಯಾಡಳಿತ ಸಂಸ್ಥೆ ಸೇರಿ ಒಟ್ಟು 53 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಬೆಳಗಿನ ಅವಧಿಯಲ್ಲೇ ಬಿರುಸಿನಿಂದ ನಡೆಯಿತು. ಬಂಟ್ವಾಳ ತಾಲೂಕಿನಲ್ಲಿ 381 ಪುರುಷರು, 414 ಮಹಿಳೆಯರು ಸೇರಿ 795 ಮತದಾರರು ಇದ್ದು, ತಾವು ಪ್ರತಿನಿಧಿಸುವ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಮತ ಚಲಾಯಿಸುತ್ತಿದ್ದಾರೆ. ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಸಹಿತ ಕಾಂಗ್ರೆಸ್ ಸದಸ್ಯರು ಬಂಟ್ವಾಳ ಪುರಸಭೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ. ಚುನಾವಣಾ ಕಣದಲ್ಲಿ ಕಿಶೋರ್ ಬಿ.ಆರ್ (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.
Be the first to comment on "ವಿಧಾನಪರಿಷತ್ ಉಪಚುನಾವಣೆ: ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಸಹಿತ ಕಾಂಗ್ರೆಸ್ ಸದಸ್ಯರಿಂದ ಮತ ಚಲಾವಣೆ"