CREATOR: gd-jpeg v1.0 (using IJG JPEG v80), quality = 82
ಶೆಡ್ ತೆರವು
ಶೆಡ್ ತೆರವು
ನಿರುಪಯುಕ್ತ ರೈಲ್ವೆ ಶೆಡ್ ತೆರವಿಗೆ ಮೊದಲು
ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ದಶಕಗಳಿಂದ ಕಾರ್ಯಾಚರಿಸುತ್ತಿದ್ದು, ಬಳಿಕ ಪಾಳು ಬಿದ್ದಿದ್ದ ರೈಲ್ವೆ ಶೆಡ್ ಅನ್ನು ಬುಧವಾರ ತೆರವುಗೊಳಿಸಲಾಯಿತು.
ಅಕ್ಟೋಬರ್ 19ರಂದು ರೈಲ್ವೆ ಇಂಜಿನಿಯರ್ ರಾಮಪ್ರಿಯ ಬಂಟ್ವಾಳ ರೈಲ್ವೆ ನಿಲ್ದಾಣ ಸಹಿತ ಮಾರ್ಗದ ತಪಾಸಣೆಗೆಂದು ಬಂದಿದ್ದ ಸಂದರ್ಭ, ಸ್ಥಳೀಯರು ಅವರನ್ನು ಭೇಟಿಯಾಗಿ ರೈಲ್ವೆ ಶೆಡ್ ನಿರುಪಯುಕ್ತವಾಗಿದ್ದು, ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದರು. ಕೂಡಲೇ ಇಂಜಿನಿಯರ್ ಅವರು ಸಿಬಂದಿಗೆ ಜೆಸಿಬಿಯಿಂದ ಶೆಡ್ ಅನ್ನು ತೆರವುಗೊಳಿಸಿ ಎಂದು ಸ್ಥಳೀಯರ ಮನವಿಗೆ ಸ್ಪಂದಿಸಿದ್ದರು. ಈ ಸಂದರ್ಭ ರೈಲ್ವೆ ಹೋರಾಟಗಾರ ಸುದರ್ಶನ ಪುತ್ತೂರು ಜತೆಗಿದ್ದರು.
ಇದೀಗ ಬುಧವಾರ ಜೆಸಿಬಿ ಮೂಲಕ ಶೆಡ್ ತೆರವುಗೊಳಿಸಲಾಗಿದೆ. ರೈಲ್ವೆ ನಿಲ್ದಾಣದ ಎರಡನೇ ಪ್ಲಾಟ್ ಫಾರ್ಮ್ ಹಿಂಬದಿ ಇರುವ ರೈಲ್ವೆ ಜಾಗದಲ್ಲಿ ಮೀಟರ್ ಗೇಜ್ ರೈಲುಗಳು ಓಡುತ್ತಿದ್ದ ಕಾಲಕ್ಕೆ ಸಿಬಂದಿ ಉಳಿದುಕೊಳ್ಳುವ ಸಲುವಾಗಿ ಕಾರ್ಮಿಕರ ವಸತಿಗೃಹ ಮಾಡಲಾಗಿತ್ತು. ಕಬ್ಬಿಣದ ಕಂಬಗಳಿಂದ ಕೂಡಿದ ಶೆಡ್ ಇದಾಗಿದ್ದು, ಗಟ್ಟಿಮುಟ್ಟಾಗಿತ್ತು. ಕೆಲ ವರ್ಷಗಳ ಕಾಲ ಇಲ್ಲಿ ವಾಸ್ತವ್ಯವಿದ್ದ ಕಾರ್ಮಿಕರು ತೆರಳಿದ ನಂತರ ಖಾಲಿ ಉಳಿದಿತ್ತು. ಸುಮಾರು ಇಪ್ಪತ್ತೈದು ವರ್ಷಗಳಿಂದೀಚೆಗೆ ಈ ಶೆಡ್ ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ. ಆದರೆ ಇಲ್ಲಿ ರಾತ್ರಿವೇಳೆ ಅಪರಿಚಿತರು ಬಂದು ತಂಗುವುದು, ದುಶ್ಚಟಗಳನ್ನು ಹೊಂದಿದವರು ಆಗಮಿಸುವುದು ನಡೆಯುತ್ತಿದ್ದು, ಸುತ್ತಮುತ್ತಲಿನವರಿಗೂ ಆತಂಕ ತಂದೊಡ್ಡಿತ್ತು. ಇದೀಗ ಶೆಡ್ ತೆರವುಗೊಳಿಸಲಾಗಿದ್ದು, ರೈಲ್ವೆ ಇಲಾಖೆ ತನ್ನ ಇತರ ಚಟುವಟಿಕೆಗಳಿಗೆ ಈ ಜಾಗವನ್ನು ಬಳಸಿಕೊಳ್ಳಲಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)