ಬಂಟ್ವಾಳ

ಬಂಟ್ವಾಳ ತಾಲೂಕಿನ ೨೩ನೇ ಕನ್ನಡ ಸಾಹಿತ್ಯ ಸಮ್ಮೇಳನ – ಸ್ವಾಗತ ಸಮಿತಿ ಘೋಷಣೆ, ಲಾಂಛನ ಅನಾವರಣ

ಬಂಟ್ವಾಳ ತಾಲೂಕಿನ ೨೩ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಸಿದಂತೆ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಗತ ಸಮಿತಿ ಘೋಷಣೆ ಹಾಗೂ ಲಾಂಛನ ಅನಾವರಣ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಸಮಿತಿಯ ಪದಾಕಾರಿಗಳ ಮಾಹಿತಿ ಪತ್ರದ ಬಿಡುಗಡೆ ಮಾಡುವುದರ ಮೂಲಕ ಸ್ವಾಗತ ಸಮಿತಿಯ ಅಕೃತ ಘೋಷಣೆ ಮಾಡಿದರು. ಇದೇ ಸಂದರ್ಭ ಸಮ್ಮೇಳನದ ಲಾಂಛನ ಅನಾವರಣಗೊಳಿಸಲಾಯಿತು.

ಕಳೆದ ಬಾರಿ ಅಮ್ಮುಂಜೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪ್ರಧಾನ ಸಂಚಾಲಕರಾಗಿದ್ದ ಅಬೂಬಕ್ಕರ್ ಅಮ್ಮುಂಜೆ ಸಾಹಿತ್ಯ ಸಮ್ಮೇಳನದ ಆಯೋಜನೆ ಕುರಿತು ತನ್ನ ಅನುಭವ ಸಹಿತ ಮಾಹಿತಿ ನೀಡಿದರು.

ಕಸಾಪ ಪ್ರಮುಖರಾದ ಸಂಕಪ್ಪ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ ಮಾತನಾಡಿದರು. ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಮಾತನಾಡಿ, ಕನ್ನಡ ಭಾಷೆಯ ಉಳಿವಿಗೆ ಇದೊಂದು ಉತ್ತಮ ಅವಕಾಶ. ಕನ್ನಡ ಭಾಷೆಯ ಕೃಷಿಗೆ ಈ ಸಮ್ಮೇಳನದ ಮೂಲಕ ಇನ್ನಷ್ಟು ಉತ್ತೇಜನ ಸಿಗುವಂತಾಗಲಿ ಮಂಚಿ – ಕೊಳ್ನಾಡು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಮೂಲಕ ಅವಕಾಶ ನೀಡಿರುವುದು ನಮಗೆ ಹೆಮ್ಮೆಯಾಗಿದೆ.ಎಂದರು. ಮಂಚಿ ಕೊಳ್ನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲಾ ವಿಟ್ಲ ಹಾಗೂ ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ ಉಪಸ್ಥಿತರಿದ್ದರು. ಸಮಿತಿಯ ಪದಾಕಾರಿಗಳ ಮಾಹಿತಿ ಹಾಗೂ ಜವಾಬ್ದಾರಿಯ ಕುರಿತಾಗಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಪನ್ಯಾಸಕರಾದ ಎಂ ಡಿ ಮಂಚಿ ಮಾಹಿತಿ ನೀಡಿದರು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕರಾದ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ವಂದಿಸಿದರು. ಶಿಕ್ಷಕ ಹರಿಪ್ರಸಾದ್ ಕುಲಾಲ್ ನಾರ್ಶ ಕಾರ್ಯಕ್ರಮ ನಿರ್ವಹಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts