ಬಿ.ಸಿ.ರೋಡ್: ಟ್ಯಾಕ್ಸಿ ಚಾಲಕ ಭೋಜ ಮೂಲ್ಯ ನಿಧನ

  • ಅಕ್ಟೋಬರ್ 11ರಂದು ಅವರಿಗೆ ಅಪಘಾತವಾಗಿತ್ತು

ಬಂಟ್ವಾಳ: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಅಪಘಾತ ನಡೆದು ಹದಿನೆಂಟು ದಿನಗಳ ಬಳಿಕ ಆರೋಗ್ಯ ಸಮಸ್ಯೆಯಿಂದ ನಿಧನಹೊಂದಿದ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.

ಜಾಹೀರಾತು
 ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ  ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ ( 62) ನಿಧನ ಹೊಂದಿದವರು.  ಅ.11 ರಂದು ರಾತ್ರಿ 7 ರ ಸುಮಾರಿಗೆ ಅವರು ಮನೆಗೆ ಕೋಳಿ ಮಾಂಸ ಕೊಂಡುಹೋಗುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ  ತಲಪಾಡಿ ಬೈಕಂಡಿ ಚಿಕನ್ ಸ್ಟಾಲ್ ಗೆ ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಇದರಿಂದ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ  ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಏಳು ದಿನಗಳ ನಂತರ ಇವರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಗೊಂಡು ಮನೆಗೆ ತೆರಳಿದ್ದರು. ಮನೆಯಲ್ಲಿ ಉಸಿರಾಟದ ತೊಂದರೆ ಕಂಡು ಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆವರು ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು. ಅಪಘಾತ ಪ್ರಕರಣದ ಬಗ್ಗೆ ಈಗಾಗಲೇ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್.ಐ.ಸುತೇಶ್ ಅವರು ಮರಣೋತ್ತರ ಪರೀಕ್ಷೆ ವೇಳೆ ಹಾಜರಿದ್ದರು.
ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಬೋಜ ಮೂಲ್ಯ ಅವರು ಸುಮಾರು 42 ವರ್ಷಗಳ ಕಾಲ ಅಂಬಾಸಿಡರ್ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ಬಿಸಿರೋಡಿನ ಆಸುಪಾಸಿನಲ್ಲಿ ಬೋಜಣ್ಣ ಎಂದೇ ಖ್ಯಾತಿ ಪಡೆದಿದ್ದ ಇವರು ಕಾರು ಪಾರ್ಕ್ ನಲ್ಲಿ ಪರಿಚಯಸ್ಥರನ್ನು ಕರೆದು ಮಾತನಾಡುವ ವ್ಯಕ್ತಿಯಾಗಿದ್ದರು. ಕಾರು ಚಾಲಕರ ಸಂಘದಲ್ಲಿ ಸಕ್ರಿಯರಾಗಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್: ಟ್ಯಾಕ್ಸಿ ಚಾಲಕ ಭೋಜ ಮೂಲ್ಯ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*