ಬಂಟ್ವಾಳ ತಾಲೂಕಿನ ಬುಡೋಳಿಯ ಸೇರ ನಿವಾಸಿ ದೈವಾರಾಧಕ ಲೋಕಯ್ಯ ಸೇರ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ 57 ವರ್ಷಗಳಿಂದ ಜಾನಪದ ಕಲಾವಿದರಾಗಿ, ದೈವಾರಾಧನೆ ಕ್ಷೇತ್ರದಲ್ಲಿ ನರ್ತಕ ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುವ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾಗಿ ಪ್ರಕಟಣೆ ತಿಳಿಸಿದೆ.