ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಸುಮಾರು 13 ಸಾವಿರ ರೂ ಮೌಲ್ಯದ ಪ್ರಾಜೆಕ್ಟರ್ ಅನ್ನು ಹಸ್ತಾಂತರಿಸಲಾಯಿತು.
ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬೇಬಿ ಕುಂದರ್ ಅವರು ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಅವರಿಗೆ ಹಸ್ತಾಂತರಿಸಿದ ಬಳಿಕ ಮಾತನಾಡಿ, ಶಾಲಾ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಇದು ಪೂರಕವಾಗಲಿ ಎಂದು ಹಾರೈಸಿದರು.
ಈ ಸಂದರ್ಭ ದಾನಿ ಹಾಗೂ ರೋಟರಿ ನಿಯೋಜಿತ ಅಧ್ಯಕ್ಷರಾದ ಬಸ್ತಿ ಮಾಧವ ಶೆಣೈ, ರೋಟರಿ ಆನ್ಸ್ ಅಧ್ಯಕ್ಷೆ ಭಾರತಿ ಬಿ ಕುಂದರ್, ರೋಟರಿ ಕ್ಲಬ್ ಸದಸ್ಯರಾದ ರಾಜೇಶ್ ಸುವರ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಮುಖ್ಯ ಶಿಕ್ಷಕಿ ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ. ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಸುಶೀಲಾ ಲಿಂಗಪ್ಪ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಶಿಕ್ಷಕಿ ತಾಹಿರಾ ಬಿ. ವಂದಿಸಿದರು. ಬಳಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.
Be the first to comment on "ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಬಂಟ್ವಾಳದಿಂದ ಪ್ರಾಜೆಕ್ಟರ್ ಹಸ್ತಾಂತರ"