ಬಂಟ್ವಾಳ: ನವೆಂಬರ್ 19ರಂದು ಶಂಭೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಬಾಲಬಂಧು ಪುರಸ್ಕಾರಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಸಹಶಿಕ್ಷಕಿ ಸುಧಾ ನಾಗೇಶ್ ಆಯ್ಕೆಗೊಂಡಿದ್ದಾರೆ. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಜಾಹೀರಾತು
ಕವನ ಸಂಕಲನ, ವಿದ್ಯಾರ್ಥಿ ಕೈಪಿಡಿ, ತುಳು ಕೃತಿ ರಚನೆ ಸಹಿತ ಹಲವು ಪುಸ್ತಕಗಳನ್ನು ಬರೆದಿರುವ ಅವರು, ಮಕ್ಕಳ ಸಂಘಟನೆಗೆ ದುಡಿದಿದ್ದಾರೆ. 576 ವಿದ್ಯಾರ್ಥಿಗಳಿಗೆ ಗೈಡ್ಸ್ ತರಬೇತಿ ನೀಡಿದ್ದು, 5 ಗೈಡ್ಸ್ ಗಳು ರಾಷ್ಟ್ರಪತಿ ಪುರಸ್ಕಾರವನ್ನು ,55 ಗೈಡ್ಸ್ ಗಳು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅಲ್ಲದೆ 12 ಸ್ಕೌಟ್ಸ್ ಮತ್ತು 15,ಗೈಡ್ಸ್ ಗಳು ‘ವಿಶ್ವ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸಿದ್ದಾರೆ. 4 ಸ್ಕೌಟ್ ಮತ್ತು ಇಬ್ಬರು ಗೈಡ್ಸ್ ವಿಟ್ಲ ಸ್ಥಳೀಯ ಸಂಸ್ಥೆಯು ಹಮ್ಮಿಕೊಂಡಿದ್ದ ಜಿಲ್ಲಾ ಕ್ಯಾಂಪೊರಿಯಲ್ಲಿ ಭಾಗವಹಿಸಿದ್ದಾರೆ ಎಂದವರು ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಾಲಬಂಧು ಪುರಸ್ಕಾರಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಹಶಿಕ್ಷಕಿ ಸುಧಾ ನಾಗೇಶ್ ಆಯ್ಕೆ"
Be the first to comment on "ಬಾಲಬಂಧು ಪುರಸ್ಕಾರಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಹಶಿಕ್ಷಕಿ ಸುಧಾ ನಾಗೇಶ್ ಆಯ್ಕೆ"