ತುಂಬೆ Thumbe ಕಡೆಗೋಳಿ ಎಂಬಲ್ಲಿ ಖಾಸಗಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿ ಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ

Accident at kadegoli

ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ಯಿಯಾಗಿದ್ದು, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ.
ಬಸ್ ಚಾಲಕನ ವಿರುದ್ಧ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ ಗಳು ಅತಿವೇಗದಲ್ಲಿ ಚಲಾಯಿಸುವುದು, ಪದೇ ಪದೇ ಹಾರ್ನ್ ಮಾಡಿ ಎದುರಿರುವ ವಾಹನ ಸವಾರರನ್ನು ಗಲಿಬಿಲಿಗೊಳಿಸುವ ಕೆಲಸವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Accident death at thumbe kadegoli


Be the first to comment on "ಖಾಸಗಿ ಬಸ್ ಬೈಕಿಗೆ ಡಿಕ್ಕಿ, ಸ್ಥಳದಲ್ಲೇ ಸವಾರ ಸಾವು, ಮತ್ತೋರ್ವ ಗಂಭೀರ"