ವಕ್ಫ್ ಅಕ್ರಮ ಮೂಲಕ ರೈತ ವಿರೋಧಿ ನೀತಿ: ಶಾಸಕ ರಾಜೇಶ್ ನಾಯ್ಕ್ ಆರೋಪ

ಬಂಟ್ವಾಳ: ಬಂಟ್ವಾಳದಲ್ಲಿಯೂ ಮೋನಪ್ಪ ಗೌಡ ಎಂಬ ಕೃಷಿಕರ ಆಸ್ತಿಯನ್ನು ವಕ್ಫ್ ಎನ್ನಲಾಗುತ್ತಿದ್ದು, ಅದಕ್ಕೆ ನ್ಯಾಯಾಲಯಕ್ಕೂ ಹೋದರ ಏನೂ ಆಗದ ಸ್ಥಿತಿ ಇದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಸಂವಿಧಾನಕ್ಕೆ ತೊಂದರೆಯಾಗುತ್ತಿದೆ ಎನ್ನುತ್ತಿದ್ದವರು ಈಗ ಎಲ್ಲಿದ್ದಾರೆ ಎಂದು ಪ್ರಶ್ನೆ ಮಾಡಬೇಕಾದ ಸ್ಥಿತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ರಾಜ್ಯ ಸರಕಾರ ಲ್ಯಾಂಡ್ ಜಿಹಾದ್ ವಕ್ಫ್ ಅಕ್ರಮದ ಮೂಲಕ ರೈತ ವಿರೋಧಿ ನೀತಿಯನ್ನು ತಳೆದಿದೆ ಎಂದು ಆರೋಪಿಸಿ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಹಿಂದುಗಳು, ರೈತರ ಭೂಮಿಯನ್ನು ವಕ್ಫ್ ಆಸ್ತಿಯಾಗಿ ಪರಿವರ್ತಿಸುವ ಕಾರ್ಯ ಮಾಡುತ್ತಿದ್ದು, ಕಾಂಗ್ರೆಸ್‌ನ ಇಂತಹ ನೀತಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಕೇಂದ್ರದ ಮೋದಿ ಸರಕಾರ ಕಾನೂನಿಗೆ ತಿದ್ದುಪಡಿ ತರುವ ಕಾರ್ಯ ಮಾಡಲಿದೆ ಎಂದವರು ಹೇಳಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹಾಗೂ ರಾಜ್ಯ ಮುಖಂಡ ವಿಕಾಸ್ ಪುತ್ತೂರು ಮಾತನಾಡಿ, ರಾಜ್ಯ ಸರಕಾರವು ಕಳೆದ ಒಂದೂವರೆ ವರ್ಷಗಳಲ್ಲಿ ಒಮ್ಮೆಯೂ ಹಿಂದುಗಳ ಪರ ಕೆಲಸ ಮಾಡಿಲ್ಲ ಎಂದು ಆಪಾದಿಸಿದರು.

ಪ್ರತಿಭಟನೆಯಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್,  ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ , ಶಿವಪ್ರಸಾದ್ ಶೆಟ್ಟಿ ,ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಸಂದೇಶ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಪುರುಷೋತ್ತಮ ಸಾಲ್ಯಾನ್ ಶಂಭೂರು, ಜನಾರ್ದನ ಸಾಲ್ಯಾನ್, ಮೋನಪ್ಪ ದೇವಸ್ಯ, ಯಶೋಧರ ಕರ್ಬೆಟ್ಟು, ಪ್ರೇಮನಾಥ ಶೆಟ್ಟಿ ಅಂತರ, ವೆಂಕಟೇಶ್ ನಾವಡ, ಡೊಂಬಯ ಅರಳ, ಆನಂದ ಎ.ಶಂಭೂರು, ಮೋಹನ್ ಪಿ.ಎಸ್, ರಾಮದಾಸ್ ಬಂಟ್ವಾಳ್, ದೇವದಾಸ್ ಶೆಟ್ಟಿ, ನಂದರಾಮ ರೈ ಬೆಳ್ಳೂರು, ಗಣೇಶ್ ರೈ ಮಾಣಿ, ಸುರೇಶ್ ಕೋಟ್ಯಾನ್, ದಿನೇಶ್ ಭಂಡಾರಿ, ಹರಿಪ್ರಸಾದ್, ಪುಷ್ಪರಾಜ್ ಚೌಟ, ಗೋವಿಂದ ಪ್ರಭು, ಸನತ್ ಕುಮಾರ್ ರೈ, ವಿದ್ಯಾವತಿ ಪ್ರಮೋದ್, ಹರ್ಷಿಣಿ ಪುಷ್ಪಾನಂದ, ದಿನೇಶ್ ಶೆಟ್ಟಿ ದಂಬೆದಾರ್, ಮೀನಾಕ್ಷಿ ಗೌಡ, ಸಂತೋಷ್ ರಾಯಿಬೆಟ್ಟು, ಅಜಿತ್ ಶೆಟ್ಟಿ ಮೊದಲಾದವರಿದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಕ್ಫ್ ಅಕ್ರಮ ಮೂಲಕ ರೈತ ವಿರೋಧಿ ನೀತಿ: ಶಾಸಕ ರಾಜೇಶ್ ನಾಯ್ಕ್ ಆರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*