ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಶ್ರೀವಿಶ್ವರೂಪದರ್ಶನ ಕಾರ್ಯಕ್ರಮ ನಡೆಯಿತು. ಶ್ರೀ ಕ್ರೋಧಿ ನಾಮ ಸಂವತ್ಸರದ ಕಾರ್ತಿಕ ಶುದ್ಧ ನವಮಿಯಾದ ಭಾನುವಾರ ಪ್ರಾತಃಕಾಲ 4.00 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕ ಕಲ್ಯಾಣಕ್ಕಾಗಿ 23ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ದಿವ್ಯ ಜ್ಯೋತಿ ಬೆಳಗಿಸಿ ನಡೆಸಲಾಯಿತು. ಬೆಳಗ್ಗೆ ಕಾಕಡಾರತಿ, ಜಾಗರ ಪೂಜೆ ನಂತರ ವಿಶೇಷಾಲಂಕಾರ ಮಾಡಲಾಯಿತು. ಶ್ರೀ ದೇವರ ವಿಶೇಷ ವಿಶ್ವರೂಪದರ್ಶನ ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ವಿಶೇಷ ಭಜನಾ ಕಾರ್ಯಕ್ರಮವೂ ಜರಗಿತು. ಪೈ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಜಿತ್ ಪೈ ವಿಶೇಷ ಸೇವಾದಾರರಾಗಿದ್ದರೆ, ಬಂಟ್ವಾಳ ಕೆನರಾ ಬ್ಯಾಂಕ್ ವಿಶೇಷ ಸಹಕಾರ ನೀಡಿತು. ಈ ಸಂದರ್ಭ ಆಡಳಿತ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು. ಇನ್ನಷ್ಟು ಚಿತ್ರಗಳಿಗೆ ಮುಂದೆ ಸ್ಕ್ರೋಲ್ ಮಾಡಿರಿ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪದರ್ಶನ"
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪದರ್ಶನ"