ಜಿಲ್ಲಾ ಸುದ್ದಿ

ಲಾಟರಿ, ಮಟ್ಕಾ, ಬೆಟ್ಟಿಂಗ್ ನಿಯಂತ್ರಣ – ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ADC ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. (ಚಿತ್ರ: ಇಂಟರ್ನೆಟ್) pic courtesy: internet

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ತಪಾಸಣಾ ತಂಡಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಫ್ಲೈಯಿಂಗ್ ಸ್ಕ್ಯಾಡ್ ಸಭೆ ನಡೆಯಬೇಕು. ಇಲ್ಲಿಯವರೆಗೂ ನಡೆದ ಪ್ರಕರಣಗಳ ಬಗ್ಗೆ ಜರುಗಿಸಿದ ಕ್ರಮದ ಬಗ್ಗೆ ಮಾಹಿತಿಯನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಆನ್‍ಲೈನ್ ಆ್ಯಪ್‍ಗಳನ್ನು ನಂಬಿ ಸಾರ್ವಜನಿಕರು ಹಣವನ್ನು ಹೂಡಿಕೆ ಮಾಡಿ ವಂಚನೆಗೆ ಒಳಗಾಗುವ ಪ್ರಕರಣಗಳು ಅತಿಯಾಗಿ ನಡೆಯುತ್ತಿದ್ದು ಇಂತಹ ವಂಚನೆಗಳಿಗೆ ಸಾರ್ವಕನಿಕರು ಬಲಿಪಶುಗಳಾಗಬಾgದು. ಸೈಬರ್ ವಂಚನೆ ಅಥವಾ ಇನ್ನು ಅನಧಿಕೃತ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ಹತ್ತಿರದ ಪೆÇಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಣದ ಆಮಿಷಕ್ಕಾಗಿ ಆನ್‍ಲೈನ್ ಮೂಲಕ ತಮ್ಮ ಹಣವನ್ನು ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ನಕಲಿ ಜಾಲತಾಣಗಳನ್ನು ನಂಬಿ ಹಣವನ್ನು ಹೂಡಿಕೆ ಮಾಡಬಾರದು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಣವನ್ನು ಹೂಡಿಕೆ ಮಾಡುವಂತೆ ಜಾಗೃತಿ ಮೂಡಿಸಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಆನ್‍ಲೈನ್ ವಂಚನೆ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯು ಶೀಘ್ರವಾಗಿ ಕ್ರಮ ಜರುಗಿಸಬೇಕು ಎಂದರು.

ಜಾಹೀರಾತು

ಕರ್ನಾಟಕ ಸರಕಾರವು ಈಗಾಗಲೇ ಲಾಟರಿಗಳನ್ನು ರಾಜ್ಯದಲ್ಲಿ ನಿಷೇಧಿಸಿದ್ದರೂ ಕೂಡ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಲಾಟರಿ ಹಾವಳಿಗಳು ಹೆಚ್ಚುತ್ತಿದೆ. ಈ ಬಗ್ಗೆ ಅಧಿಕಾರಿಗಳು ಲಾಟರಿ ಹಾವಳಿ ನಡೆಯುವಂತ ಪ್ರದೇಶಗಳಿಗೆ ನಿರಂತರ ಭೇಟಿ ಪರಿಶೀಲನೆ ನಡೆಸಿ ಲಾಟರಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಡಿವೈಎಸ್‍ಪಿ ಮಂಜುನಾಥ ಆರ್ ಜಿ, ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ( ಪಶ್ಚಿಮ ವಲಯ) ಡಿ.ರಂಗರಾಜು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಸಹಾಯಕ ನಿರ್ದೇಶಕ ಎಂ.ಪಿ ಪ್ರಸನ್ನ, ಪಿಂಚಣಿ , ಸಣ್ಣ ಉಳಿತಾಯ ಅಭಿವೃದ್ಧಿ ಅಧಿಕಾರಿ ಆನಂದ್ ಎಂ.ಪಿ, ಪ್ರಥಮ ದರ್ಜೆ ಸಹಾಯಕಿ ಅನಿತಾ ಲಕ್ಷ್ಮೀ ಎಂ.ಎಚ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.