ಬಂಟ್ವಾಳ

ವಿಟ್ಲದಲ್ಲಿ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ: ಕಠಿಣ ಕ್ರಮಕ್ಕೆ ರಾಜ್ಯ ಸರಕಾರಿ ನೌಕರರ ಸಂಘದಿಂದ ಮನವಿ

ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯನಿರತರಾಗಿದ್ದ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಕಚೇರಿ ಸೊತ್ತುಗಳನ್ನು ಧ್ವಂಸ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಮತ್ತು ನಿಯೋಜಿತ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಘಟನೆಯಿಂದ ಸರಕಾರಿ ನೌಕರರ ಮನೋಸ್ಥೈರ್ಯ ಕುಂದಿದ್ದು, ಕಚೇರಿಯಲ್ಲಿ ಕೆಲಸ ಮಾಡಲು ಹೆದರುವಂಥ ಪರಿಸ್ಥಿತಿ ಉಂಟಾಗಿದೆ ಕೇಸು ದಾಖಲಾದ ಆರೋಪಿಯೊಬ್ಬರು ಬಂಟ್ವಾಳ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ಅವರನ್ನೂ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಸರಕಾರಿ ನೌಕರರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ಸಲ್ಲಿಸಲು ಅನುವು ಮಾಡಿಕೊಡುವಂತೆ ವಿನಂತಿಸಿದರು.

ಮನವಿ ಸಲ್ಲಿಕೆ

ಮನವಿ ಸಲ್ಲಿಕೆ ಸಂದರ್ಭ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ನಿಯೋಜಿತ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಜ್ಯ ಪರಿಷತ್ತು ಸದಸ್ಯ ಜನಾರ್ದನ ಜೆ, ತಾಲೂಕು ಖಜಾಂಚಿ ಬಸಯ್ಯ ಆಲಮಟ್ಟಿ, ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ ಪೂಜಾರಿ, ಉಪತಹಸೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರನಾಥ ಮಿತ್ತೂರು, ದಿವಾಕರ ಮುಗುಳ್ಯ, ಕಂದಾಯ ನಿರೀಕ್ಷಕರಾದ ವಿಜಯ್, ಪ್ರಶಾಂತ್ ಶೆಟ್ಟಿ, ಸರಕಾರಿ ನೌಕರರ ಸಂಘದ ನಾನಾ ಇಲಾಖೆಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಂದಾಯ ಇಲಾಖೆ ನೌಕರರ ಸಂಘದಿಂದ ಖಂಡನೆ: ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts