ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಪಚ್ಚಾಜೆಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆದಡಿ ಬೆಳೆಸಿದ ಸಹ್ಯಾದ್ರಿ ಕೆಂಪುಮುಕ್ತಿ ಭತ್ತದ ತಳಿಯ ಕೃಷಿ ಕ್ಷೇತ್ರಗಳಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಬೇಟಿ ನೀಡಿ ಭತ್ತದ ಬೆಳೆಯ ಸ್ಥಿತಿಗತಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರತಜ್ಞರಾದ ಹರೀಶ ಶೆಣೈರವರು ಬೆಳೆಯ ಬೆಳವಣಿಗೆ ಕುರಿತು ತೃಪ್ತಿ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಕೈಗೊಳಬೇಕಾದ ಬೇಸಾಯ ಕ್ರಮಗಳು ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ಕೈಗೊಂಡ ಕೃಷಿಕರಿಗೆ ವಿಸ್ಕತ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಗತಿಪರ ಕೃಷಿಕರಾದ ಉಮೇಶ್ ಪೂಜಾರಿ, ಬೋಜ ಪೂಜಾರಿ, ಶ್ರೀದರ, ಅನ್ಸಲ್ ಪಿಂಟೋ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಕೇಶವ ರಾವ್ ಉಪಸ್ಥಿತರಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…