ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ, ಮೊಡಂಕಾಪುಬಶಾಲೆಯ ವಿಧ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊಡಂಕಾಪು,ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಹರಿಪ್ರಿಯಾ ಇವರು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ
ಶಾಲಾ ಸಂಚಾಲಕರಾದ ಅತೀ ವಂದನೀಯ ಗುರು ವಲೇರಿಯನ್ ಡಿಸೋಜಾರವರು, ಶಾಲಾ ಮುಖ್ಯೋಪಾಧ್ಯಾಯರಾದ ಅತೀ ವಂದನೀಯ ಗುರು ಮೆಲ್ವಿನ್ ಲೋಬೊರವರು, ಶಿಕ್ಷಕ ಮತ್ತು ರಕ್ಷಕ ಸಂಘದ ಸಮಿತಿಯ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…