
ಬಂಟ್ವಾಳ: ಭಾನುವಾರ ಸಂಜೆ ಸಿಡಿಲಾಘಾತದಿಂದ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ.ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಸಮೀಪ ಮುರಿಯಾಜೆ ಮನೆಯ ಚಂದ್ರಹಾಸ ಎಂಬವರ ಪುತ್ರ ಸುಬೋಧ್ ಸಿ (14) ಸಾವನ್ನಪ್ಪಿದ ಬಾಲಕ.
ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ ಸಿಡಿಲು ಬಡಿದು ಗಾಯಗೊಂಡಿದ್ದು, ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿಸಲಾಯಿತು. ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿರುತ್ತದೆ.ಸ್ಥಳಕ್ಕೆ ಕೆದಿಲ ಗ್ರಾಪಂ ಅಧ್ಯಕ್ಷ ಹರೀಶ್ ವಾಲ್ತಾಜೆ, ಸದಸ್ಯರಾದ ಅಜೀಜ್, ಉಮೇಶ್ ಮುರುವ, ಕಂದಾಯ ಇಲಾಖೆಯ ರೆವೆನ್ಯೂ ಇನ್ಸ್ ಪೆಕ್ಟರ್ ಪ್ರಶಾಂತ್ ಶೆಟ್ಟಿ ಹಾಗೂ ಗ್ರಾಮಾಡಳಿತಾಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು.
14 year old Boy died by lightning attack in Kedila village, BANTWAL TALUK


Be the first to comment on "ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯುವಶ"