ಬಂಟ್ವಾಳ

ಪಣೋಲಿಬೈಲು: 23, 24ರಂದು ವರ್ಷಾವಧಿ ಕೋಲ

ಬಂಟ್ವಾಳ: ಹಿಂದು ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ನವೆಂಬರ್ 23ರಿಂದ 24ನೇ ಭಾನುವಾರದವರೆಗೆ ವರ್ಷಾವಧಿ ಕೋಲ ಕಾರ್ಯಕ್ರಮಗಳು ನೆರವೇರಲಿವೆ ಎಂದು ಆಡಳಿತಾಧಿಕಾರಿ ತಹಸೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದ್ದಾರೆ.

ಜಾಹೀರಾತು

23ರಂದು ಸಂಜೆ ಕೊಪ್ಪರಿಗೆ ಮುಹೂರ್ತ, ಬಳಿಕ ಕುಣಿತ ಭಜನೆ, ದೀಪ ಪ್ರಜ್ವಲನೆ, ನೃತ್ಯಾರಾಧನೆ ಬಳಿಕ ನಾಟಕ ಕಾರ್ಯಕ್ರಮಗಳು ನಡೆಯಲಿವೆ. 24ರಂದು ಬೆಳಗ್ಗೆ ನವಕ ಕಲಶಪ್ರದನ, 12 ತೆಂಗಿನಕಾಯಿ ಗಣಹೋಮ, ನಾಗತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಭಜನಾ ಸಂಕೀರ್ತನೆ, ಸಂಜೆ ಪಣೋಲಿಬೈಲು ಶ್ರೀಕೃಷ್ಣ ಮಂದಿರದಲ್ಲಿ ಭಜನಾ ಸಂಕೀರ್ತನೆ ಬಳಿಕ ಮೆರವಣಿಗೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ, ಗೀತ ಸಾಹಿತ್ಯ ಸಂಭ್ರಮ, ಭಂಡಾರದಮನೆಯಿಂದ ದೈವಗಳ ಭಂಡಾರ ಬರುವುದು, ತುಳು ನಾಟಕ ಬಳಿಕ ರಾತ್ರಿ 12ರಿಂದ ವರ್ಷಾವಧಿ ಕೋಲ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts