ಬಂಟ್ವಾಳ ಪುರಸಭೆಯಲ್ಲಿ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ತಾಲೂಕಿನ ನಾನಾ ಗ್ರಾಮ ಪಂಚಾಯಿತಿಗಳಲ್ಲಿ ತೆರವಾದ 11 ಸ್ಥಾನಗಳಿಗೆ ನವೆಂಬರ್ 23ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಮಸ್ಟರಿಂಗ್ ಕಾರ್ಯ ನೆರವೇರಿತು.
ಬಂಟ್ವಾಳ ಪುರಸಭೆಯ ವಾರ್ಡ್ 2ರ ಕಾಂಗ್ರೆಸ್ ಸದಸ್ಯರಾಗಿದ್ದ ಗಂಗಾಧರ್ ಲೋಕಸಭಾ ಚುನಾವಣೆಯ ಸಂದರ್ಭ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಈ ವೇಳೆ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಅವರ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹಾಗೆಯೇ ನಾನಾ ಗ್ರಾಪಂಗಳ ಒಟ್ಟು 11 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…