ಫರಂಗಿಪೇಟೆ

ತುಂಬೆ ದೇವಸ್ಥಾನದಲ್ಲಿ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧಿಸಿದ ಪೊಲೀಸರು.. ವಿವರ ಇಲ್ಲಿದೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 4ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ತಂಡ ಇರಾ ಎಂಬಲ್ಲಿ ಬಂಧಿಸಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮೂವರು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರಿನ ಪಿಲಾವಲಪ್ಪು ನಿವಾಸಿ ಬಶೀರ್ ಕೆ.ಪಿ ಯಾನೆ ಆಕ್ರಿ ಬಶೀರ್ (44),  ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನಿವಾಸಿ ಮಹಮ್ಮದ್ ನಿಯಾಝ್ ಯಾನೆ ಪ್ರಕಾಶ್ ಬಾಬು (46), ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಎಫ್. ಜೆ. ಮಹಮ್ಮದ್ ಇಸ್ಮಾಯಿಲ್ (53) ಬಂಧಿತರು ಎಂದವರು ಮಾಹಿತಿಯಲ್ಲಿ ತಿಳಿಸಿದ್ದಾರೆ. ಬಂಧಿತರಿಂದ ರೂ 1,25,000 ಮೌಲ್ಯದ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಲಾಗಿರುತ್ತದೆ.

ಜಾಹೀರಾತು

ಆರೋಪಿಗಳ ಪೈಕಿ ಬಶೀರ್ ಕೆಪಿ ಎಂಬಾತನು ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಮತ್ತು ಆರೋಪಿ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಎಂಬಾತನ ವಿರುದ್ದ 3 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಕಾರ್ಯಾಚರಣೆಯಲ್ಲಿ ದ.ಕ. ಜಿಲ್ಲಾ ಪೊಲೀಸ್ ಆಧೀಕ್ಷಕರಾದ ಯತೀಶ್ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿಎಸ್ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಾದ ಎಸ್ ವಿಜಯಪ್ರಸಾದ್ ನೇತೃತ್ವದ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ ಮತ್ತು ಪಿಎಸ್‌ಐ ಗಳಾದ ನಂದ ಕುಮಾರ್, ಹರೀಶ್ ಎಮ್ ಆರ್, ಲೋಲಾಕ್ಷ ಸಿಬ್ಬಂಧಿಗಳಾದ ಉದಯ ರೈ, ಪ್ರವೀಣ್ ಎಂ, ಅದ್ರಾಮ, ಹರಿಶ್ಚಂದ್ರ, ನಝೀರ್, ಕೃಷ್ಣ ನಾಯ್ಕ್, ಸಂತೋಷ್, ರಾಹುಲ್ ರಾವ್, ಅಶೋಕ್, ವಿವೇಕ್ ಕೆ, ಕುಮಾರ್ ಎಚ್.ಕೆ, ಬಸವರಾಜ್, ರಮ್‌ಜಾನ್, ಕುಮಾರ, ಮಹಾಂತೇಶ್ ಮತ್ತು ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್, ದಿವಾಕರ ಒಳಗೊಂಡ ತಂಡ ಪಾಲ್ಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 4ರಂದು ರಾತ್ರಿ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ಕಳವು ಮಾಡಲಾಗಿತ್ತು. ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ನಡೆದ ಸಂದರ್ಭ, ಕ್ಯಾಮರಾ ಮತ್ತು ಡಿವಿಆರ್ ಅನ್ನೂ ಕಳ್ಳರು ಹೊತ್ತೊಯ್ದಿದ್ದರು.  ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌ಆರ್ ನ್ನು ಕೂಡ ಬಿಡದೆ ಎಗರಿಸಿದ್ದು, ಈ ಘಟನೆಗೂ ಮುನ್ನಾದಿನ ಸುಜೀರ್ ನ ದೇವಸ್ಥಾನದಲ್ಲಿ ಕಳವು ಪ್ರಕರಣ ನಡೆದಿತ್ತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.