ಬಂಟ್ವಾಳ: ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (45) ಮೃತಪಟ್ಟವರಾಗಿದ್ದಾರೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜಾಹೀರಾತು
ರಾತ್ರಿ ಕಚೇರಿಯ ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ನಿಧನರಾಗಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿ ಜಯರಾಮ ಇದ್ದಿರುವುದು ಕಂಡು ಬಂದಿದೆ.ಅವರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಚೇರಿ ಕರ್ತವ್ಯದಲ್ಲಿದ್ದಾಗ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ನಿಧನ"
Be the first to comment on "ಕಚೇರಿ ಕರ್ತವ್ಯದಲ್ಲಿದ್ದಾಗ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ನಿಧನ"