ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ ಶಾಲಾ ವಾರ್ಷಿಕೋತ್ಸವಗಳು ಮಕ್ಕಳಿಗೆ ಹೊಸ ಹುರುಪನ್ನು ತಂದು ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಉಂಟು ಮಾಡುತ್ತವೆ, ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಸುರೇಂದ್ರ ರಾವ್ ಹೇಳಿದರು.
ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾ ಎಂಬಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಶಾಲೆಗಳ ಅಸ್ತಿತ್ವ ಪೋಷಕರ ಕೈಯಲ್ಲಿದೆ, ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ, ಪೋಷಕರು ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಕಡೇಶಿವಾಲಯ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ಸುರೇಶ್ ಬನಾರಿ ಹೇಳಿದರು.
ಈ ಸಂದರ್ಭ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿಗಳನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾ ರವರನ್ನು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಡೇಶಿವಾಲಯ ಗ್ರಾಮದ ಸ್ವಚ್ಛತಾ ಸೇನಾಣಿಗಳಾದ ಲಕ್ಷ್ಮಿ, ಪ್ರಮೀಳಾ, ಸವಿತಾ ರವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ರೋಟರಿ ಪ್ರಮುಖರಾದ ಪುಷ್ಪರಾಜ್ ಹೆಗ್ಡೆ, ಉದ್ಯಮಿ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ನಿವೃತ್ತ ಸೈನಿಕ ವಿದ್ಯಾದರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ,ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್ ಅಂಜನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಶಿಕ್ಷಕ ಗೋಪಾಲಗೌಡ ಸದರಿ ವರ್ಷದ ವರದಿ ವಾಚಿಸಿ, ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ವಾಚಿಸಿ, ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.
Be the first to comment on "ಕಡೇಶಿವಾಲಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾ ವಾರ್ಷಿಕೋತ್ಸವ"