ಫೆಂಗಲ್ ಚಂಡಮಾರುತದ ಪ್ರಭಾವದಿಂದ ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಎಲ್ಲರೂ ಎಚ್ಚರಿಕೆಯಿಂದ ಇರುವುದು. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ತಾಲೂಕು ಕಂಟ್ರೋಲ್ ರೂಮ್ ನಂಬರ್ 08255-232500 ಅಥವಾ
7337669102 ಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಬಂಟ್ವಾಳ ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೀನುಗಾರರಿಗೆ ಸೂಚನೆ: ಹವಾಮಾನ ಮುನ್ಸೂಚನೆಯಂತೆ ಡಿಸೆಂಬರ್ 6ರವರೆಗೆ ಅರಬಿ ಸಮುದ್ರವು ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರ