ಬಂಟ್ವಾಳ: ಬಂಟ್ವಾಳ ಪುರಸಭೆಯ ರೆಂಗೇಲು, ಶಾಂತಿಗುಡ್ಡೆಯಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗ್ರಾಮದ ಕೌಡೇಲು ಪ್ರದೇಶದಲ್ಲಿ ಕುಡಿಯುವ ನೀರಿನ ಮುಖ್ಯ ಕೊಳವೆಯು ಒಡೆದು ನೀರಿನ ಸೋರಿಕೆಯಾಗುತ್ತಿರುವುದರಿಂದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಆದ್ದರಿಂದ ರೆಂಗೇಲು ಶಾಂತಿಗುಡ್ಡೆ ವ್ಯಾಪ್ತಿಗೆ ಎರಡು ದಿನಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.