ಬಂಟ್ವಾಳ: ವಕೀಲರ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ ಬಂಟ್ವಾಳ ವಕೀಲರ ಸಂಘ ಹಾಗೂ ಅಧಿವಕ್ತಾ ಪರಿಷತ್ ಆಶ್ರಯದಲ್ಲಿ ನಡೆಯಿತು.
ಬಂಟ್ವಾಳ ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿಎನ್ ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರಾದ ಉಮಾ ಎನ್ ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭ ಅಧಿವಕ್ತಾ ಪರಿಷತ್ ನ ಸಾಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಫರಂಗಿಪೇಟೆ ಅರ್ಕುಳದ ಶ್ರೀಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ 32,000 ರೂ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಯವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ ಕೆ ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು. ವಕೀಲರ ಸಂಘ ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಸ್ವರ್ಣಗೌರಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ ಸಿದ್ದಕಟ್ಟೆ ವಂದಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು
Be the first to comment on "ವಕೀಲರ ದಿನಾಚರಣೆ: ಬಂಟ್ವಾಳದಲ್ಲಿ ಕಾನೂನು ಕಾರ್ಯಾಗಾರ"