ಡಿ. 7 ಮತ್ತು 8 ರಂದು ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವ ಹಾಗೂ ವಾರ್ಷಿಕೋತ್ಸವ

ಬಂಟ್ವಾಳ : ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ನ ರಜತ ಮಹೋತ್ಸವವು ಡಿ. 07ರಂದು ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ. 08 ರಂದು ನಡೆಯಲಿದೆ ಎಂದು ಶಾಲಾ ಸಂಚಾಲಕ ಹಾಜಿ ಜಿ.ಅಹಮದ್ ಮುಸ್ತಾಫ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಡಿ. 07 ರಂದು ನಡೆಯುವ ರಜತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ನ ಚೆಯರ್ಮೇನ್ ಹಾಜಿ ಜಿ. ಅಬೂಬಕ್ಕರ್ ಗೋಳ್ತಮಜಲು ವಹಿಸಲಿದ್ದು, ರಜತ ರತ್ನ ಸಂಚಿಕೆಯನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಬಿಡುಗಡೆಗೊಳಿಸುವರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ಮೇನ್ ಡಾ.ಎಂ.ಮೋಹನ್ ಆಳ್ವ ಧ್ವಜಾರೋಹಣ ನೆರವೇರಿಸುವರು.

ಬ್ಲೂ ರಾಯಲ್ ಗ್ರೂಫ್ ಆಫ್ ಕಂಪೆನೀಸ್ ನಾ ಮೆಸೇಜಿಂಗ್ ಡೈರೆಕ್ಟರ್ ರೊನಾಲ್ಡ್ ಮಾರ್ಟಿಸ್ ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಮಾಜಿ ಸಚಿವ ಬಿ. ರಮಾನಾಥ ರೈ, ದ.ಕ ಮತ್ತು ಉಡುಪಿ ಜಿಲ್ಲಾ ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ, ಡಿಡಿಪಿಐ ವೆಂಕಟೇಶ್ ಪಟಾಗರ್, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಭಾಗವಹಿಸಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ. ಕೆ.ಎಸ್. ಯಾಸಿರ್ ಅವರ ಕಲ್ಲಡ್ಕ ಮ್ಯೂಸಿಯಂ ನ ವಸ್ತು ಪ್ರದರ್ಶನ, ಕುದ್ರೋಳಿ ಗಣೇಶ್ ಅವರಿಂದ ಮ್ಯಾಜಿಕ್ ಶೋ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹಾಜಿ ಜಿ.ಅಹಮದ್ ಮುಸ್ತಾಫ ತಿಳಿಸಿದ್ದಾರೆಡಿ. 8 ರಂದು ನಡೆಯುವ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ ನ ಮೆಸೇಜಿಂಗ್ ಟ್ರಸ್ಟಿ ಹಾಜಿ. ಜಿ. ಮುಹಮ್ಮದ್ ಹನೀಫ್ ಗೋಳ್ತಮಜಲು ಅಧ್ಯಕ್ಷತೆ ವಹಿಸಲಿದ್ದು, ಮಂಗಳೂರಿನ ಭಾರತ್ ಇನ್ಸ್ ಪ್ರಾಟೆಕ್ ನ ಮೆಸೇಜಿಂಗ್ ಡೈರೆಕ್ಟರ್ ಮುಸ್ತಫಾ ಎಸ್.ಎಂ. ಅತಿಥಿಗಳಾಗಿ ಭಾಗವಹಿಸುವರು.

 

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿ. 7 ಮತ್ತು 8 ರಂದು ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವ ಹಾಗೂ ವಾರ್ಷಿಕೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*