ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರಿಕ ಹಿತರಕ್ಷಣಾ ಯುವ ವೇದಿಕೆ ಬಂಟ್ವಾಳ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ ಶೋಷಿತ ವರ್ಗದವರ ಪ್ರಾತಃಸ್ಮರಣೀಯ ಸೂರ್ಯ ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನ ಸ್ಮರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು
ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಜನಾರ್ದನ ಬೋಳಂತೂರು, ಚಿಂತಕರಾದ ಹೊನ್ನಪ್ಪ ಕುಂದರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಸಭಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ನಾಗರಿಕ ಹಿತರಕ್ಷಣಾ ಯುವ ವೇದಿಕೆ ಅಧ್ಯಕ್ಷ ಕೆ. ಸತೀಶ್ ಅರಳ ಮಾನ್ಯ ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ದಲಿತ ನಾಗರಿಕ ಹಿತರಕ್ಷಣಾ ಯುವ ವೇದಿಕೆ ಬಂಟ್ವಾಳ ವಹಿಸಿಕೊಂಡರು. ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಶಾರದಾ ರತ್ನಾಕರ ನಾಯ್ಕ್, ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಧರ್ಣಪ್ಪ ಬಡಗಬೆಳ್ಳೂರು, ಸಾಹಿತಿ ಸತೀಶ್ ಕಕ್ಯಪದವು, ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರೀತಿರಾಜ್ ದ್ರಾವಿಡ್ ಸ್ವಾಗತಿಸಿದರು. ಅಭಿಲಾಷ್ ಕೃಷ್ಣಾಪುರ ಧನ್ಯವಾದ ಅರ್ಪಿಸಿದರು.