ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಒದಗಿಸುವ ಕಾರ್ಯವಾಗಬೇಕು ಎಂದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.
PIC COURTESY: BASTI MADHAVA SHENOY
ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಪಂಚಕೋಶದ ಆಧಾರದಲ್ಲಿ ಇದನ್ನು ರೂಪಿಸಲಾಗಿದೆ. ಆದರೆ ಕಲ್ಲಡ್ಕದಲ್ಲಿ ಇದು ಹಲವು ವರ್ಷಗಳಿಂದ ನಡೆಯುತ್ತಿದೆ ಎಂದು ಶ್ಲಾಘಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಕಾರ್ಯವಾಹ ಮುಕುಂದ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾನ್, ಹರೀಶ ಪೂಂಜ, ಭಾಗೀರಥಿ ಮುರುಳ್ಯ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ ಗಂಟಿಹೊಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹಲವು ಉದ್ಯಮಿಗಳು, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸ್ವಾಗತಿಸಿದರು. ಸಂಸ್ಥಾಪಕರೂ ಆಗಿರುವ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ವಿದ್ಯಾಸಂಸ್ಥೆಯ ಬೆಳವಣಿಗೆ ಹಾಗೂ ಸ್ಥಾಪನೆಯ ಉದ್ದೇಶಗಳನ್ನು ವಿವರಿಸಿದರು.
ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪದವಿಕಾಲೇಜು, ಸೆಕೆಂಡರಿ ಸ್ಕೂಲ್, ಪದವಿಪೂರ್ವ ಕಾಲೇಜು, ಹೈಸ್ಕೂಲು ಹಾಗೂ ಪ್ರಾಥಮಿಕ ಶಾಲೆ ಹಾಗೂ ಶಿಶುಮಂದಿರಕ್ಕೆ ಸೇರಿದ 3338 ವಿದ್ಯಾರ್ಥಿಗಳು ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಭಾಗಿಯಾಗಿ ನಾನಾ ರೀತಿಯ ಪ್ರದರ್ಶನಗಳನ್ನು ಈ ಸಂದರ್ಭ ನೀಡಿದರು.
Be the first to comment on "KALLADKA KREEDOTSAVA: ಕಲ್ಲಡ್ಕ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ ವೀಕ್ಷಿಸಿದ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್"