ಕಲ್ಲಡ್ಕ

KALLADKA KREEDOTSAVA: ಕಲ್ಲಡ್ಕ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ ವೀಕ್ಷಿಸಿದ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್

PHOTO: APUL IRA

ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣ ಒದಗಿಸುವ ಕಾರ್ಯವಾಗಬೇಕು ಎಂದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು.

PHOTO: APUL IRA

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

PHOTO: APUL IRA

PHOTO: BASTI MADHAVA SHENOY

PIC COURTESY: BASTI MADHAVA SHENOY

PHOTO: BASTI MADHAVA SHENOY

PHOTO: BASTI MADHAVA SHENOY

ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಪಂಚಕೋಶದ ಆಧಾರದಲ್ಲಿ ಇದನ್ನು ರೂಪಿಸಲಾಗಿದೆ. ಆದರೆ ಕಲ್ಲಡ್ಕದಲ್ಲಿ ಇದು ಹಲವು ವರ್ಷಗಳಿಂದ ನಡೆಯುತ್ತಿದೆ ಎಂದು ಶ್ಲಾಘಿಸಿದರು.

PHOTO: APUL IRA

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಕಾರ್ಯವಾಹ ಮುಕುಂದ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾನ್, ಹರೀಶ ಪೂಂಜ, ಭಾಗೀರಥಿ ಮುರುಳ್ಯ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ ಗಂಟಿಹೊಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್,  ಹಲವು ಉದ್ಯಮಿಗಳು, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸ್ವಾಗತಿಸಿದರು.  ಸಂಸ್ಥಾಪಕರೂ ಆಗಿರುವ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ವಿದ್ಯಾಸಂಸ್ಥೆಯ ಬೆಳವಣಿಗೆ ಹಾಗೂ ಸ್ಥಾಪನೆಯ ಉದ್ದೇಶಗಳನ್ನು ವಿವರಿಸಿದರು.

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪದವಿಕಾಲೇಜು, ಸೆಕೆಂಡರಿ ಸ್ಕೂಲ್, ಪದವಿಪೂರ್ವ ಕಾಲೇಜು, ಹೈಸ್ಕೂಲು ಹಾಗೂ ಪ್ರಾಥಮಿಕ ಶಾಲೆ ಹಾಗೂ ಶಿಶುಮಂದಿರಕ್ಕೆ ಸೇರಿದ 3338 ವಿದ್ಯಾರ್ಥಿಗಳು ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಭಾಗಿಯಾಗಿ ನಾನಾ ರೀತಿಯ ಪ್ರದರ್ಶನಗಳನ್ನು ಈ ಸಂದರ್ಭ ನೀಡಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ