ಮುಸ್ಲಿಂ ಸಮಾಜ ಶಿಕ್ಷಣದಲ್ಲಿ ಹಿಂದಿದ್ದ ಸಂದರ್ಭದಲ್ಲಿ ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ದೇಶದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಉದ್ದೇಶದಿಂದ ಸಾಕಷ್ಟು ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಪ್ರಾರಂಭಗೊಂಡಿದ್ದು, ದ.ಕ., ಉಡುಪಿ ಜಿಲ್ಲೆಯಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳನ್ನು ಸೇರಿಸಿಕೊಂಡು ಮೀಫ್ ಎಂಬ ಸಂಘಟನೆಯನ್ನು ಮಾಡಿ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ದ.ಕ.-ಉಡುಪಿ ಜಿಲ್ಲಾ ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಹೇಳಿದರು.
ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್‌ನ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಒಂದು ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಮುನ್ನಡೆಸುವುದು ಸವಾಲಿನ ವಿಚಾರವನ್ನು ಗೋಳ್ತಮಜಲಿನ ಗ್ರಾಮೀಣ ಪರಿಸರದಲ್ಲಿ ಜೆಮ್ ಶಿಕ್ಷಣ ಸಂಸ್ಥೆಯು ಸುದೀರ್ಘ ಹಾಗೂ ಶ್ರಮದಾಯಕ ಪಯಣದ ಮೂಲಕ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದರು.
ಫಾತಿಮಾ ಮೆಮೋರಿಯಲ್ ಎಜ್ಯುಕೇಶನಲ್ ಟ್ರಸ್ಟ್ನ ಚೇರ್‌ಮೆನ್ ಹಾಜಿ ಜಿ.ಅಬೂಬಕ್ಕರ್ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ ಅವರು ರಜತ ರತ್ನ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಬ್ಲೂ ರಾಯಲ್ ಗ್ರೂಫ್ ಆಫ್ ಕಂಪೆನೀಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ರೊನಾಲ್ಡ್ ಮಾರ್ಟಿಸ್ ಅವರು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಪದ್ಮನಾಭ ರೈ ಭಾಗವಹಿಸಿದ್ದರು.
ಶಿಕ್ಷಕ ರಕ್ಷಕ ಸಂಘದ ಸಂಘದ ಹಮೀದ್ ಆಲಿ, ಉಪಾಧ್ಯಕ್ಷೆ ಪುಷ್ಪಾ ಸತೀಶ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು, ಬಿ.ಮೂಡ ಸರಕಾರಿ ಪ.ಪೂ.ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಶಾಲೆಯ ಮುಖ್ಯಶಿಕ್ಷಕ ನಿರಂಜನ್ ವೇದಿಕೆಯಲ್ಲಿದ್ದರು. ಶಾಲೆಯ ಆಡಳಿತ ನಿರ್ದೇಶಕ ಹಾಜಿ ಜಿ.ಮೊಹಮ್ಮದ್ ಹನೀಫ್ ಪ್ರಸ್ತಾವನೆಗೆದರು. ಶಿಕ್ಷಕಿ ನಾಝಿಯಾ ಸ್ವಾಗತಿಸಿದರು. ಸಂಚಾಲಕ ಜಿ.ಅಹಮದ್ ಮುಸ್ತಾಫ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಗೋಳ್ತಮಜಲು ಜೆಮ್ ಪಬ್ಲಿಕ್ ಸ್ಕೂಲ್ ರಜತ ಮಹೋತ್ಸವಕ್ಕೆ ಚಾಲನೆ"