ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಕಾರದೊಂದಿಗೆ 2025ರ ಜನವರಿ 19ರಂದು ಬಂಟ್ವಾಳದ ಭಂಡಾರಿಬೆಟ್ಟು ಎಸ್.ವಿ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಭಾನುವಾರ ಸಂಜೆ ನಡೆಯಿತು.
ಲಾಂಛನ ಬಿಡುಗಡೆಗೊಳಿಸಿದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಪ್ ಡಿ.ಸುವರ್ಣ ಮಾತನಾಡಿ, ಕೋಟಿಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಲಾಂಛನ ಅರ್ಥಪೂರ್ಣವಾಗಿ ಬಿಡುಗಡೆಯಾಗಿದೆ, ಮುಂದೆ ನಡೆಯುವ ಕ್ರೀಡೋತ್ಸವ ಕಾರ್ಯಕ್ರಮವೂ ಯಶಸ್ವಿಯಾಗಿ ನಡೆಯುವಂತೆ ಸಮಿತಿಯ ಜೊತೆ ಸಮಾಜದ ಬಾಂಧವರು ಜೊತೆಯಾಗಲಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮೂಲಕ ಸಮಾಜಮುಖಿಯಾದ ಉತ್ತಮ ಕಾರ್ಯ ನಡೆಯಲಿ ಬಿಲ್ಲವ ಸಮಾಜದ ಯುವ ಕ್ರೀಡಾಪಟುಗಳು ಕ್ರೀಡೆಯ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಲು ಇಂತಹ ಕ್ರೀಡೋತ್ಸವ ಅಗತ್ಯ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಮಾತನಾಡಿ, ಶಿಸ್ತುಬದ್ದವಾದ ಕಾರ್ಯಕ್ರಮ ಮೂಡಿಬರುವ ಮೂಲಕ, ತಾಲೂಕಿನ ಬಿಲ್ಲವರು ಸಂಘಟಿತರಾಗಲು ಕ್ರೀಡೋತ್ಸವ ಕಾರ್ಯಕ್ರಮ ಸಕಾಲಿಕವಾಗಿದೆ. ಪಕ್ಷ ಬೇಧಮರೆತು ಮನೆಯ ಕಾರ್ಯಕ್ರಮ ಎಂಬ ದೃಷ್ಟಿಯಿಂದ ಭಾಗವಹಿಸಿ ಎಂದು ಮನವಿ ಮಾಡಿದರು.
ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೇಲ್ಕಾರ್ ಮಾತನಾಡಿ, ತಾಲೂಕಿನಾದ್ಯಂತ ಗಮನ ಸೆಳೆಯುವಂತೆ ಕ್ರೀಡೋತ್ಸವ ನಡೆಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸರ್ವರ ಸಹಕಾರ ಅಗತ್ಯವೆಂದರು.
ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳ ಕುರಿತು ವಿವರಿಸಿದರು.
ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಕೆ. ಹರಿಕೃಷ್ಣ ಬಂಟ್ವಾಳ್, ಎಂ. ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ, ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಕೋಶಾಧಿಕಾರಿ ಆನಂದ ಸಾಲಿಯಾನ್, ಜತೆಕಾರ್ಯದರ್ಶಿ ರಾಜೇಶ್ ಸುವರ್ಣ ಮಿತ್ತಬೈಲ್, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಮೆಲ್ಕಾರ್, ಪ್ರಚಾರ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಮಿತ್ತಬೈಲು, ಕ್ರೀಡೋತ್ಸವ ನಿರ್ವಹಣಾ ಸಮಿತಿ ಸಂಚಾಲಕ ಐತಪ್ಪ ಪೂಜಾರಿ ಬಿ.ಸಿ.ರೋಡ್, ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ರಕ್ತೇಶ್ವರಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರಮುಖರಾದ ಬಾಲಕೃಷ್ಣ ಅಂಚನ್ ಸಹಿತ ಕ್ರೀಡೋತ್ಸವ ಸಮಿತಿ ಹಾಗೂ ಬಿಲ್ಲವ ಸಮಾಜ ಸೇವಾ ಸಂಘದ ವಿವಿಧ ವಿಭಾಗಗಳ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು. ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ ವಂದಿಸಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡೋತ್ಸವದವರೆಗೆ ವಿದ್ಯುದ್ದೀಪಾಲಂಕೃತವಾದ ಆಕರ್ಷಕ ಶೈಲಿಯಲ್ಲಿ ವಿನ್ಯಾಸಗೊಳಿಸಲಾದ ಲಾಂಛನ ಬ್ರಹ್ಮಶ್ರೀ ನಾರಾಯಣಗುರುಮಂದಿರದ ಎದುರು ನೋಡುಗರ ಗಮನ ಸೆಳೆಯಲಿದೆ.