ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಎಂಬುವವರು ಸರಕಾರಿ ಜಮೀನು ಅತಿಕ್ರಮಣ ಸ್ಥಳ ಭೇಟಿ ನೀಡಿದ ಸಂದರ್ಭ ಹಲ್ಲೆ ನಡೆಸಿರುವುದನ್ನು ಬಂಟ್ವಾಳ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಖಂಡಿಸಲಾಗಿದ್ದು, ಆರೋಪಿಯ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಈ ಕುರಿತು ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು..ಮನವಿ ಸಲ್ಲಿಸುವ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಅನಿಲ್ ಕೆ ಪೂಜಾರಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಮಾರ್, ಉಪಾಧ್ಯಕ್ಷರಾದ ಕರಿಬಸಪ್ಪ ನಾಯಕ್, ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಮತ್ತಿಹಳ್ಳಿಪ್ರಕಾಶ್, ಖಜಾಂಚಿ ವೈಶಾಲಿ ಎ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಸೀತಾರಾಮ ಪೂಜಾರಿ, ಗೌರವ ಸಲಹೆಗಾರರಾದ ನವೀನ್ ಬೆಂಜನಪದವು, ರಾಜ್ಯ ಪರಿಷತ್ ಸದಸ್ಯರಾದ ಜೆ ಜನಾರ್ಧನ್,ಕಂದಾಯ ನೌಕರರ ಸಂಘದ ಗೌರವಾಧ್ಯಕ್ಷರಾದ ರಾಜೇಶ್ ನಾಯ್ಕ್, ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಕ್ರಮ ಕೈಗೊಳ್ಳದಿದ್ದರೆ, ಲೇಖನಿ ಸ್ಥಗಿತ ಮುಷ್ಕರ ನಡೆಸುವುದಾಗಿ ಸಂಘ ಎಚ್ಚರಿಸಿದೆ.
Be the first to comment on "ಗ್ರಾಮ ಆಡಳಿತ ಅಧಿಕಾರಿಗಳ ಹಲ್ಲೆ ಘಟನೆ: ಬಂಟ್ವಾಳ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಖಂಡನೆ, ಮನವಿ ಸಲ್ಲಿಕೆ"