ಬಂಟ್ವಾಳ

ಬಿಎಂಎಸ್ ಆಟೊರಿಕ್ಷಾ ಚಾಲಕ ಮಾಲೀಕರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ:  ಅಟೋ ರಿಕ್ಷಾ ಚಾಲಕ ಮಾಲಕರ ಸಂಘ ( ಬಿ.ಎಂ.ಎಸ್ ಸಂಯೋಜಿತ) ಬಂಟ್ವಾಳ ತಾಲೂಕು ಮೋಟಾರ್ ಮತ್ತು ಜನರಲ್ ಮಜ್ದೂರ್ ಸಂಘ ದ.ಕ. ಘಟಕ) 36ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಬಂಟ್ವಾಳ ತಾಲೂಕು  ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅಧ್ಯಕ್ಷತೆಯಲ್ಲಿ  ನಡೆಯಿತು.

ಜಾಹೀರಾತು

ತಾಲೂಕಿನ ರಿಕ್ಷಾ ಚಾಲಕರಿಗೆ ಅನ್ಯಾಯವಾದರೆ,  ಯಾವುದೇ ಸಮಸ್ಯೆಗಳಾದ ಸಂದರ್ಭದಲ್ಲಿ ನನ್ನನ್ನು ಸಂಪರ್ಕಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಂಡ್ತಿಮಾರ್ ಭರವಸೆ ನೀಡಿದರು.

ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಅವರು ಮಾತನಾಡಿ,ರಿಕ್ಷಾ ಚಾಲಕರ ಶ್ರೇಯೋಭಿವೃದ್ದಿಗಾಗಿ ರಚನೆ ಮಂಡಳಿ ಮೂಲಕ ಉಪಯೋಗವನ್ನು ಪಡೆಯುವ ಮೂಲಕ ಬದುಕು ಹಸನಾಗಿಸಿ ಎಂದು ತಿಳಿಸಿದರು. ಸಂಘಟನೆ ಮೂಲಕ ಉತ್ತಮ ಕಾರ್ಯಕ್ರಮಗಳಿಗೆ  ಇನ್ನಷ್ಟು ಪ್ರೇರಣೆ ನೀಡಲಿ ಎಂದು ಹೇಳಿದರು.

ಸಂಘದ ಕಾನೂನು ಸಲಹೆಗಾರ ನ್ಯಾಯವಾದಿ ಜಯರಾಮ ರೈ ಮಾತನಾಡಿ, ಸಂಘಟನೆಯ ಬಗ್ಗೆ, ಪ್ರೀತಿ, ಭರವಸೆ,  ವಿಶ್ವಾಸ,ನಂಬಿಕೆಯನ್ನು ಬೆಳೆಸಿಕೊಂಡರೆ ತಾನು ಬೆಳೆಯುವುದರ ಜೊತೆಗೆ ಸಂಘಟನೆಯು ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಣ್ಣಿನ ವೈದ್ಯರಾದ ಡಾ.ಮರೀಟ ಅವರು ರಿಕ್ಷಾ ಚಾಲಕರಿಗೆ ಆರೋಗ್ಯ ಮಾಹಿತಿ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ, ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್,  ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮಣಿಹಳ್ಳ, ಪುತ್ತೂರು ಅದ್ಯಕ್ಷ ರಾಜೇಶ್ ಮರೀಲು, ಸುಳ್ಯ ಅಧ್ಯಕ್ಷ ರಾಧಾಕೃಷ್ಣ ಸುಳ್ಯ, ಬೆಳ್ತಂಗಡಿ ಅಧ್ಯಕ್ಷ ಕೃಷ್ಣ ಬೆಳಾಲು, ಮೂಡುಬಿದಿರೆ ಅಧ್ಯಕ್ಷ ದೀಪಕ್ ರಾಜ್, ಬಂಟ್ವಾಳ ತಾಲೂಕಿನ ಸಂಘಟನಾ ಕಾರ್ಯದರ್ಶಿ ಕೃಷ್ಣ ಕುಮಾರ್ ಬಂಟ್ವಾಳ ಉಪಸ್ಥಿತರಿದ್ದರು. ತಾಲೂಕಿನ‌ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನೆಲ್ಯಡ್ಕ ವಾರ್ಷಿಕ ವರದಿ ವಾಚಿಸಿದರು. ಜಿಲ್ಲಾ ಉಪಾಧ್ಯಕ್ಷ  ನಾರಾಯಣ ಪೂಜಾರಿ ಸ್ವಾಗತಿಸಿದರು. ಆನಂದ ಶೆಟ್ಟಿ ವಂದಿಸಿದರು. ಉಮಾಶಂಕರ್ ಬಡ್ಡಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts