ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಮಾನವ ಹಕ್ಕು ದಿನವನ್ನು ಆಚರಿಸಲಾಯಿತು. ರಾಜ್ಯ ಸರ್ಕಾರದ ನಿರ್ದೇಶನದನ್ವಯ ಪ್ರತೀ ವರ್ಷ ಡಿಸೆಂಬರ್ 10ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದ್ದು, ಯಾವುದೇ ತಾರತಮ್ಯ ತೋರಿಸದೇ ಎಲ್ಲರೂ ಸಮಾನರು ಎಂಬುದನ್ನು ಅರಿತು ಅದರಂತೆ ನಡೆದುಕೊಳ್ಳಬೇಕು ಎಂದು ಈ ಸಂದರ್ಭ ಉಪತಹಶೀಲ್ದಾರರಾದ ನವೀನ್ ಕುಮಾರ್ ಬೆಂಜನಪದವು ಹೇಳಿದರು.