ಬಂಟ್ವಾಳ: 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿದೆ. ಸಮ್ಮೇಳನದಲ್ಲಿ ಪುಸ್ತಕ ಮತ್ತು ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ಸಮಿತಿ ಸಂಚಾಲಕರರಾದ ದಿನೇಶ್ ಎನ್ ತುಂಬೆ 9844619763 ಸಂಪರ್ಕಿಸಬಹುದು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ