ಬಂಟ್ವಾಳ

ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ

2025 ಜನವರಿ 4 ಮತ್ತು 5ರಂದು ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಂಚಿ – ಕೊಳ್ನಾಡು ಪ್ರೌಢಶಾಲೆಯ ಆವರಣದಲ್ಲಿ  ಆಯೋಜನೆಯಾಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು  ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಹಿರಿಯ ಸಾಹಿತಿಗಳ, ಪ್ರತಿಭಾನ್ವಿತ ಯುವ ಬರಹಗಾರರ, ಸಾಹಿತ್ಯಪ್ರಿಯರೆಲ್ಲರ ಸಾಹಿತ್ಯ ಜಾತ್ರೆಯಾಗಿ  23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೆರುಗು ನೀಡಲಿದೆ. ಕನ್ನಡ ಭಾಷೆಯ ಕೃಷಿಗೆ ಇನ್ನಷ್ಟು ಹೊಸ ರೂಪ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ‘ಸಾಹಿತ್ಯದಿಂದ ಸಾಮರಸ್ಯ’ ಎನ್ನುವ ಆಶಯದಡಿ ಈ ಸಮ್ಮೇಳನವು ಜರಗಲಿದೆ ಎಂದು ತಿಳಿಸಿದರು.

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಸತೀಶ್ ಆಳ್ವ ಇರಾ ಬಾಳಿಕೆ ಮಾತನಾಡಿ, ಗ್ರಾಮಾಂತರ ಮಂಚಿ ಪ್ರದೇಶವು ಹಲವಾರು ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದೆ. ಮಂಚಿಯ ಇಬ್ಬರು ಸಾಹಿತಿಗಳು ಈಗಾಗಲೇ  ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಂಡಿರುವುದು ಆಯೋಜನೆ ಮಾಡುತ್ತಿರುವ ನಮಗೆ ಹೆಮ್ಮೆಯ ಸಂಗತಿ. ಮಂಚಿ – ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಯಶಸ್ವಿಯಾಗಿ ಮೂಡಿ ಬರಲಿ ಎಂದು ತಿಳಿಸಿದರು.

ಹಿರಿಯ ಸಾಹಿತಿ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಡಾರು ಮಹಾಬಲೇಶ್ವರ ಭಟ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಮಾಧವ ಮಾವೆ,  ಅಬ್ದುಲ್ ರಝಾಕ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಬಂಟ್ವಾಳ ತಾಲೂಕು ಘಟಕದ ಗೌರವ ಪ್ರಧಾನ ಕಾರ್ಯದರ್ಶಿ ವಿ. ಸುಬ್ರಹ್ಮಣ್ಯ ಭಟ್, ಪದಾಧಿಕಾರಿ ಅಬೂಬಕ್ಕರ್ ಅಮ್ಮುಂಜೆ, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ. ಮಹಮ್ಮದ್ ಪಾಣೆಮಂಗಳೂರು, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಸಮಿತಿಯ ಕೋಶಾಧಿಕಾರಿ ಸುಲೈಮಾನ್ ಜಿ ಸುರಿಬೈಲು, ಸಂಚಾಲಕರಾದ ಉಮಾನಾಥ ರೈ ಮೇರಾವು, ಬಿ ಎಂ ಅಬ್ಬಾಸ್ ಆಲಿ, ಪುಷ್ಪರಾಜ ಕುಕ್ಕಾಜೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲಾ ವಿಟ್ಲ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅಧ್ಯಕ್ಷರ ಅನುಮತಿ ಮೇರೆಗೆ ಸಮ್ಮೇಳನ ಪೂರ್ವಭಾವಿ ಕೆಲಸ ಕಾರ್ಯಗಳು, ರೂಪುರೇಷೆ , ಯೋಜನೆಗಳ ಬಗ್ಗೆ ಬಗ್ಗೆ ಚರ್ಚಿಸಲಾಯಿತು. ಸ್ವಾಗತ ಸಮಿತಿಯ ಸುಮಾರು 60 ಸದಸ್ಯರು ಉಪಸ್ಥಿತರಿದ್ದರು.

ಸಮಿತಿಯ ಪ್ರಧಾನ ಸಂಯೋಜಕರಾದ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಡಿ ಮಂಚಿ ವಂದಿಸಿದರು. ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ  ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ್ಯ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಕನ್ನಡ ಭಾಷೆಯ ಉಳಿವಿಗೆ ಜಾಗೃತಿಗಳಾಗುತ್ತಿವೆ. ವೈವಿಧ್ಯ ಪ್ರಕಾರಗಳಲ್ಲಿ ಕಾರ್ಯಕ್ರಮಗಳು ಸಂಯೋಜನೆಯಾಗುವ ಕಾರಣ ಕನ್ನಡ ಭಾಷೆಯ ಬೆಳವಣಿಗೆ ಸಾಧ್ಯವಾಗಿದೆ. ಸಾಹಿತ್ಯ ಸಮ್ಮೇಳನಗಳ ಮೂಲಕ ಸಾಹಿತಿಗಳನ್ನು ಹಾಗೂ ಸಾಹಿತ್ಯಪ್ರಿಯರನ್ನು ಬೆಸೆಯುವ ಕಾರ್ಯ ನಿರಂತರವಾಗಿದೆ. ಸಾಹಿತ್ಯ ಕೃಷಿಯು ನಿರಂತರವಾಗಿ ಸಾಗುತಲಿದ್ದು ಈ ಬಾರಿಯ ಬಂಟ್ವಾಳ ತಾಲೂಕು ಸಾಹಿತ್ಯ ಸಂಭ್ರಮಕ್ಕೆ ಮಂಚಿ ಪರಿಸರವು ಸಿದ್ಧಗೊಳ್ಳುತ್ತಿದೆ.  

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ