ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಡಿಸೆಂಬರ್ 10 ರಿಂದ 16ರ ವರೆಗೆ ನಡೆಯಲಿದ್ದು, ಡಿಸೆಂಬರ್ 11ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ ತಲುಪಲಿದೆ ರಾಜ್ಯ ಸರಕಾರ ಯೂಟರ್ನ್ ಮಾಡುತ್ತಿದೆ ಎಂದು ಎಸ್.ಡಿ.ಪಿ.ಐ. ಆರೋಪಿಸಿದೆ.
ಬ್ರಹ್ಮರುಕೊಟ್ಲು ಟೋಲ್ ಪ್ಲಾಜಾ ಬಳಿಯಿಂದ ಕೈಕಂಬ ಕ್ಷೇತ್ರ ಕಚೇರಿ ಮುಂಭಾಗದವರೆಗೆ ವಾಹನ ಜಾಥಾ ಹಾಗೂ ಕೈಕಂಬ ಜಂಕ್ಷನ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ, ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ ಎಂದು ಎಸ್.ಡಿ.ಪಿ.ಐ ಆರೋಪಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…