ಬಂಟ್ವಾಳ: ಯಕ್ಷಾವಾಸ್ಯಮ್ ಕಾರಿಂಜ ಇದರ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ.ನ ವಗ್ಗ , ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.
ಮಧ್ಯಾಹ್ನ ಪಚ್ಚಾಜೆಗುತ್ತು ಜಿನರಾಜ ಆರಿಗ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಸಂಜೆ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಉಪ ಪ್ರಾಂಶುಪಾಲ ಬಿ.ಉದಯ ಕುಮಾರ್ ಜೈನ್ ಅವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆ ಕೊಡಮಾಡುವ ಯಕ್ಷವಾಸ್ಯಮ್ ಪ್ರಶಸ್ತಿಯನ್ನು ಹಿರಿಯ ಮದ್ದಳೆಗಾರರಾದ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಹಿರಿಯ ಮಹಿಳಾ ಭಾಗವತರಾದ ಲೀಲಾವತಿ ಬೈಪಡಿತ್ತಾಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.
ಯಕ್ಷಗಾನ ಹಿಮ್ಮೇಳವಾದಕ ಚಂದ್ರಶೇಖರ ಭಟ್ ಕೊಂಕಣಾಜೆ ಅಭಿನಂದನ ನುಡಿಗಳನ್ನಾಡಿದರು. ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸುಭೀಕ್ಷಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಮಡಂತ್ಯಾರು ಜೆಸಿಐ ನಿಕಟಪೂರ್ವ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆ ,ಶ್ರುತಾಂಜನ್ ಜೈನ್ ಅಲಂಪುರಿ ಗುತ್ತು ,ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರ ಗೌರವಧ್ಯಕ್ಷ ಪ್ರಮೋದ್ ಕುಮಾರ್ ರೈ,ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ,ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.
ಜಯರಾಮ ಭಟ್ ಅವರು ಸ್ವಾಗತಿಸಿದರು. ದೇವದಾಸ ಶೆಟ್ಟಿ ಬಂಟ್ವಾಳ ಅಭಿನಂದನ ಪತ್ರ ವಾಚಿಸಿದರು. ಸಂಚಾಲಕಿ ಸಾಯಿಸುಮಾ ಎಂ.ನಾವಡ ಕಾರಿಂಜ ವಂದಿಸಿದರು. ರತ್ನ ದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಸಂಸ್ಥೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ, ಭಾಗವತಿಕೆ,ಯಕ್ಷಗಾನ, ಬಳಿಕ ಮಹಿಳಾ ಕಲಾವಿದರಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಪೂರ್ಣಿಮಾ ಯತೀಶ್ ರೈ ನಿರ್ದೇಶನದ ಯಕ್ಷಗಾನ ವೀರಮಣಿ ಕಾಳಗ ಪ್ರದರ್ಶನ ನಡೆಯಿತು
Be the first to comment on "ಯಕ್ಷಾವಾಸ್ಯಮ್ ಕಾರಿಂಜ: ವಾರ್ಷಿಕೋತ್ಸವ"