ಬಂಟ್ವಾಳ: ಬಂಟ್ವಾಳ ತಾಲೂಕು,ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು,ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ,ಹಳೆ ವಿದ್ಯಾರ್ಥಿಗಳು,ಪೋಷಕರು,ಊರ ಪರವೂರ ದಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆ ಗಳ ಸಹಕಾರದಿಂದ ನಿರ್ಮಾಣಗೊಂಡ ನೂತನ ಭೋಜನಾಲಯ ಹಾಗೂ ರಂಗಮಂಟಪ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.14ರಂದು ಶನಿವಾರ ನಡೆಯಲಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಡಿಎಂಸಿ ಉಪಾಧ್ಯಕ್ಷ ಉಮೇಶ್ ಗೌಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
Be the first to comment on "ಸಿದ್ದಕಟ್ಟೆ ಸ.ಪ್ರೌ.ಶಾಲೆ: ಡಿ.14ರಂದು ನೂತನ ಭೋಜನಾಲಯ ಹಾಗೂ ರಂಗಮಂಟಪ ಉದ್ಘಾಟನೆ"