ಮಕ್ಕಳ ಕಲಾಲೋಕ, ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ವತಿಯಿಂದ ಶಂಭೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನವೆಂಬರ್ 19ರಂದು ನಡೆದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯಿಂದ ಅಭಿನಂದನಾ ಸಭೆ ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಹಾಗೂ ಸ್ವಾಗತ ಸಮಿತಿಯ ಕಾರ್ಯಧ್ಯಕ್ಷ ಹೇಮಚಂದ್ರ ಭಂಡಾರದಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳ ಸಾಹಿತ್ಯ ಸಮ್ಮೇಳನ ನಿರೀಕ್ಷೆಗೂ ಮಿರಿ ಯಶಸ್ವಿಯಾಗಿ ಶಂಭೂರು ಶಾಲೆಯು ರಾಜ್ಯಮಟ್ಟದಲ್ಲಿ ಗುರುತಿಸುವಂತಾಗಿದೆ ಹಾಗೂ ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಬಹಳ ಪ್ರಯೋಜನದಾಯಕವಾಗಿದೆ ಎಂದರು.
ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಆನಂದ ಎ ಶಂಭೂರು ಎಲ್ಲರ ಭಾಗೇದಾರಿಕೆಯಿಂದ ಮಕ್ಕಳ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿದೆ ಎಂದರು.
ಮಕ್ಕಳ ಕಲಾಲೋಕದ ಅಧ್ಯಕ್ಷರಾದ ರಮೇಶ ಎಂ ಬಾಯಾರು ಮಾತನಾಡಿ ಕಾರ್ಯಕ್ರಮದ ಯಶಸ್ಸಿಗೆ ಶಾಲೆಯ ಎಸ್.ಡಿ.ಎಂ.ಸಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿ, ಮೆರವಣಿಗೆ, ಸ್ವಾಗತ ಮತ್ತು ಆತಿಥ್ಯ, ಊಟೋಪಚಾರಗಳ ನಿರ್ವಹಣೆಗಳ ಸಮಿತಿಗಳು, ಶಂಭೂರಿನ ಪರಿಸರದ ಎಲ್ಲ ಸಂಘ ಸಂಸ್ಥೆಗಳ ವಿಶ್ವಾಸವನ್ನು ಪಡೆದು ಸಮ್ಮೇಳನವನ್ನು ನಿರೀಕ್ಷಿತ ಮಟ್ಟಕ್ಕಿಂತಲೂ ಯಶಸ್ವಿಯಾಗಿ ನಡೆಸಲಾಯಿತು ಎಂದರು. ಸಭೆಯಲ್ಲಿ ಸಮಿತಿಯ ಕೋಶಾಧಿಕಾರಿ ದಯಾನಂದ ಅಡಿಪಿಲ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಮಲ, ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಾಗರಾಜ್ ಅಡೆಪಿಲ, ಸಮಿತಿಯ ಮಾಧ್ಯಮ ಸಂಚಾಲಕ ಚಿನ್ನಾ ಕಲ್ಲಡ್ಕ, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಊರ ಗಣ್ಯರು ಹಾಗೂ ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು ಶಾಲಾ ಮುಖ್ಯಶಿಕ್ಷಕ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಮ ಡಿ. ಪಡ್ರೆ ಸ್ವಾಗತಿಸಿ, ವಂದಿಸಿದರು.
Be the first to comment on "ಮಕ್ಕಳ ಸಾಹಿತ್ಯ ಸಮ್ಮೇಳನ, ಅಭಿನಂದನಾ ಸಭೆ"