ಬಂಟ್ವಾಳ: ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಬಂಟ್ವಾಳದ ಶ್ರೀ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ವಹಿಸಲಿದ್ದು, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಕಾರಂತ, ನಿವೃತ್ತ ಸಿಡಿಪಿಒ ಗಾಯತ್ರಿ ಕಂಬಳಿ, ನಿರ್ದೇಶಕ ಮಹಾಬಲ ಕುಲಾಲ್, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Be the first to comment on "14ರಂದು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ"