ಪ್ರಮುಖ ಸುದ್ದಿಗಳು

ಯುವ ಸಮಾಲೋಚಕರ ನೇಮಕಾತಿಗೆ ಅರ್ಜಿ ಆಹ್ವಾನ.. ವಿವರಗಳು ಇಲ್ಲಿವೆ

ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ  ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ  ಅನುದಾನಿತ  ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ  ಸೇವೆಗಳ ಸಮಗ್ರ ಅಭಿವೃದ್ದಿ  ಮತ್ತು ಅನುಷ್ಠಾನ ಯೋಜನೆ  ”ಯುವ ಸ್ಪಂದನ  ಅಡಿಯಲ್ಲಿ ಯುವ ಪರಿವರ್ತಕರ ಹಾಗೂ  ಯುವ ಸಮಾಲೋಚಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 4 ಯುವ ಪರಿವರ್ತಕರು ಹಾಗೂ ಒಬ್ಬರು ಯುವ ಸಮಾಲೋಚಕರ ಅಗತ್ಯವಿದೆ. ಪದವಿ ಹಾಗೂ ಮೇಲ್ಪಟ್ಟು ತೇರ್ಗಡೆ ಹೊಂದಿದವರಿಗೆ ಆದ್ಯತೆ  ನೀಡಲಾಗುತ್ತದೆ.

ಕನಿಷ್ಠ ವಯಸ್ಸು 21 ರಿಂದ 35 ವರ್ಷಗಳು. ಸ್ಥಳೀಯ ಭಾಷೆ, ಕನ್ನಡದ ಜ್ಞಾನ ಅವಶ್ಯಕ. ಉತ್ತಮ  ಸಂವಹನ  ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು  ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂಥ  ಕಾರ್ಯಕ್ರಮಗಳನ್ನು ನಡೆಸುವುದು ಅವಶ್ಯವಿರುತ್ತದೆ. ಯುವಜನರ  ವಿಷಯಗಳ ಕುರಿತು ಸಮುದಾಯದಲ್ಲಿ ಕೆಲಸ  ಮಾಡಿರುವವರನ್ನು, ಮಾರ್ಗದರ್ಶನ/ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯವನ್ನು  ಹೊಂದಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ಸಲ್ಲಿಸುವವರು  ತಮ್ಮ ವೈಯಕ್ತಿಕ  ವಿವರಗಳನ್ನು  ಬಿಳಿ ಹಾಳೆಯಲ್ಲಿ ತಮ್ಮ ಸಂಪೂರ್ಣ ವಿವರಗಳೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ. ಕ. ಜಿಲ್ಲೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರ  ಕಚೇರಿಗೆ  ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts